ಮಹಿಳೆಯರ ಖಾತೆಗೆ ಪ್ರತಿ ತಿಂಗಳು ರೂ.800 ಪಿಂಚಣಿ ಸೌಲಭ್ಯ
ಮನಸ್ವಿನಿ ಯೋಜನೆ । Manaswini Scheme | ರಾಜ್ಯದಲ್ಲಿನ ಬಡತನ ರೇಖೆಗಿಂತ ಕೆಳಗಿರುವ 40 ರಿಂದ 64 ವರ್ಷದೊಳಗಿರುವ ಅವಿವಾಹಿತ ಹಾಗೂ ವಿಚ್ಚೇದಿತ ಮಹಿಳೆಯರಿಗೆ ಆರ್ಥಿಕ ಸೌಲಭ್ಯವನ್ನು ಒದಗಿಸಿ ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಸರ್ಕಾರದ ಆದೇಶ ಸಂಖ್ಯೆ:ಆರ್ಡಿ 95 ಡಿಎಸ್ಪಿ 2013 ದಿನಾಂಕ:01/08/2013 ರನ್ವಯ ಜಾರಿಗೆ ತರಲಾಗಿದೆ. (Govt Scheme Karnataka 2024)
ಅರ್ಹತಾ ಮಾನದಂಡ:
1.ಫಲಾನುಭವಿಯು 40 ರಿಂದ 64 ವರ್ಷದೊಳಗಿರಬೇಕು.
2.ವಾರ್ಷಿಕ ಆದಾಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ರೂ.32,000/- ಕ್ಕಿಂತ ಕಡಿಮೆ ಇರಬೇಕು.
3.ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ನಿರ್ಗತಿಕ ವಿಧವಾ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ದೇವದಾಸಿ ವೇತನ ಅಥವಾ ಅಂಗವಿಕಲರ ವೇತನ ಅಥವಾ ಯಾವುದೇ ರೀತಿಯ ಮಾಸಾಶನವನ್ನು ಸಾರ್ವಜನಿಕ ಅಥವಾ ಖಾಸಗಿ ಮೂಲಗಳಿಂದ ಪಡೆಯುತ್ತಿರುವ ವ್ಯಕ್ತಿಗಳು ಈ ಯೋಜನೆಯಡಿಯಲ್ಲಿ ಮಾಸಾಶನ ಪಡೆಯಲು ಅರ್ಹರಾಗಿರುವುದಿಲ್ಲ.
ಈ ಯೋಜನೆಗೆ ಸಲ್ಲಿಸಬೇಕಾದ ದಾಖಲೆಗಳು:
1.ಬಿಪಿಲ್ ಪಡಿತರ ಚೀಟಿ, ಇಲ್ಲದಿದ್ದಲ್ಲಿ ಆದಾಯ ಪ್ರಮಾಣ ಪತ್ರ
2.ಚುನಾವಣಾ ಗುರುತಿನ ಚೀಟಿ ಅಥವಾ ವಿಳಾಸದ ಬಗ್ಗೆ ದೃಢೀಕರಣ ದಾಖಲೆ/ವಯಸ್ಸಿನ ಬಗ್ಗೆ ದೃಢೀಕರಣ ಪತ್ರ.
3.ಅವಿವಾಹಿತರು ತಮಗೆ ವಿವಾಹ ಆಗಿಲ್ಲದಿರುವ ಬಗ್ಗೆ ಸ್ವಯಂ ಘೋಷಿತ ಪ್ರಮಾಣ ಪತ್ರ
4.ವಿವಾಹ ವಿಚ್ಚೇದಿತರು ವಿಚ್ಚೇದನದ ಸ್ವಯಂ ಘೋಷಿತ ಪ್ರಮಾಣ ಪತ್ರ
5.ಬ್ಯಾಂಕ್ ಮತ್ತು ಅಂಚೆ ಖಾತೆ ವಿವರಗಳು
6.ಆಧಾರ್ ಕಾರ್ಡ್
ಪಿಂಚಣಿ ಮೊತ್ತ: 800
ಅರ್ಜಿದಾರರು ವಾಸಸ್ಥಳ ವ್ಯಾಪ್ತಿಯ ಅಟಲ್ ಜೀ ಜನಸ್ನೇಹಿ ಕೇಂದ್ರದ ಮೂಲಕ ಅರ್ಜಿ ಸಲ್ಲಿಸತಕ್ಕದ್ದು.
ಜಿಲ್ಲಾವಾರು ಉದ್ಯೋಗಗಳು |