ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ನೇಮಕಾತಿ 2020

Davangere WCD Recruitment 2020 Apply Online For 59 Anganwadi Woker & Helper

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27 ಆಗಸ್ಟ್ 2020 ಆಗಿರುತ್ತದೆ.

ಉದ್ಯೋಗ ಸ್ಥಳ: ದಾವಣಗೆರೆ ಜಿಲ್ಲೆ

ಒಟ್ಟು ಹುದ್ದೆಗಳು:  59 

ವಿದ್ಯಾರ್ಹತೆ

* ಅಂಗನವಾಡಿ ಸಹಾಯಕಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ.( 9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)

 ಅಂಗನವಾಡಿ ಕಾರ್ಯಕರ್ತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.

ವಯೋಮಿತಿ: ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಗ್ರಾಮೀಣ ಬ್ಯಾಂಕಿನಲ್ಲಿ 9638 ಹುದ್ದೆಗಳು

ಅಗ್ನಿಶಾಮಕ ಇಲಾಖೆಯಲ್ಲಿ 1567 ಹುದ್ದೆಗಳು

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಹುದ್ದೆಗಳು

ಆಯ್ಕೆ ವಿಧಾನ: ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ / ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3 ವ‍ರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

Application Start Date: 27 ಜುಲೈ 2020

Application End Date: 27 ಆಗಸ್ಟ್ 2020

 

ವೆಬ್ಸೈಟ್

ನೋಟಿಫಿಕೇಶನ್

error: Content is protected !!