ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿ ಅಧಿಸೂಚನೆ 2022 । Karnataka High Court Job Notification 2022

ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿ ಅಧಿಸೂಚನೆ 2022

Karnataka High Court Recruitment 2022 : ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಅಗತ್ಯವಿರುವ ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ (ಶೀಘ್ರಲಿಪಿಗಾರರು) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

Telegram Group

ಇಲಾಖೆ ಹೆಸರು: ಕರ್ನಾಟಕ ಉಚ್ಚ ನ್ಯಾಯಾಲಯ
ಹುದ್ದೆಗಳ ಹೆಸರು: ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ (ಶೀಘ್ರಲಿಪಿಗಾರರು)
ಒಟ್ಟು ಹುದ್ದೆಗಳು  54 
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ಅರ್ಹತೆಗಳು

  • 1. ಅಂಗೀಕೃತ ಬೋರ್ಡ್ ಅಥವಾ ಸಂಸ್ಥೆಯಿಂದ  ನಡೆಸಲಾಗುವ ಎಸ್‌.ಎಸ್.ಎಲ್‌.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು, ಅಥವಾ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಅಥವಾ ಟೆಕ್ನಿಕಲ್ ಬೋರ್ಡ್ ನಡೆಸುವ ಆಂಗ್ಲ ಕಮರ್ಷಿಯಲ್ ಪ್ರಾಕ್ಟೀಸ್/ ಸೆಕ್ರೆಟೇರಿಯಲ್ ಪ್ರಾಕ್ಟೀಸ್ ಡಿಪ್ಲೊಮಾದಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು‌.
  • ಆಂಗ್ಲ ಶೀಘ್ರಲಿಪಿ ಪ್ರೌಢ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಆಂಗ್ಲ ಶೀಘ್ರಲಿಪಿ ಪ್ರೊಫಿಶಿಯಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.ಕರ್ನಾಟಕ 
  • ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಆಂಗ್ಲ ಪ್ರೌಢ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರಬೇಕು.

 


 

ವಯೋಮಿತಿ:
ಅಭ್ಯರ್ಥಿಗಳ ವಯಸ್ಸು  ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ
 ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ,
ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ,
ಇತರೇ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 44,900 ರಿಂದ ರೂ. 1,42,400 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಕ್ಕೆ ಸೇರಿದ ಹಾಗೂ ದೈಹಿಕ ಅಂಗವಿಕಲತೆ ಹೊಂದಿರುವ ಅಭ್ಯರ್ಥಿಗಳು ರೂ. 250, ಉಳಿದ ಅಭ್ಯರ್ಥಿಗಳು ರೂ.500 ಪಾವತಿಸಬೇಕು.

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಉಚ್ಚ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಆಯ್ಕೆ ವಿಧಾನ 
ಅಭ್ಯರ್ಥಿಗಳಿಗೆ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆ ಹಾಗೂ ಮೌಖಿಕ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

 


 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಮಾರ್ಚ್ 07, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಏಪ್ರಿಲ್ 07, 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

 

Telegram Group
error: Content is protected !!