ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ನೇಮಕಾತಿ ಅಧಿಸೂಚನೆ 2022 । HESCOM Karnataka Recruitment 2022

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ನೇಮಕಾತಿ ಅಧಿಸೂಚನೆ 2022

HESCOM Karnataka Recruitment 2022 : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತವು 2022-23ನೇ ಸಾಲಿಗೆ 238 ಶಿಶುಕ್ಷುಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ
ಹುದ್ದೆಗಳ ಹೆಸರು: ಅಪ್ರೆಂಟಿಸ್ / ಶಿಶುಕ್ಷು
ಒಟ್ಟು ಹುದ್ದೆಗಳು  238
ಅರ್ಜಿ ಸಲ್ಲಿಸುವ ಬಗೆ  ಆಫ್ ಲೈನ್ 

 

ಬೇಕಾಗಿರುವ ಅರ್ಹತೆಗಳು 

  • ಎನ್‌ಸಿವಿಟಿ / ಎಸ್‌ಸಿವಿಟಿ ಶೈಕ್ಷಣಿಕ ಸಂಸ್ಥೆಗಳಿಂದ ಎರಡು ವರ್ಷದ ಐಟಿಐ ಇಲೆಕ್ಟ್ರೀಷಿಯನ್ ಪಾಸ್‌ ಮಾಡಿರಬೇಕು. ಈ ಅಭ್ಯರ್ಥಿಗಳಿಗೆ ಒಂದು ವರ್ಷದ ಶಿಶುಕ್ಷು ತರಬೇತಿ ನೀಡಲಾಗುತ್ತದೆ.
  • ಅಭ್ಯರ್ಥಿ ವಯಸ್ಸು 20-04-2022 ಕ್ಕೆ 25 ವರ್ಷಕ್ಕಿಂತ ಮೀರಿರಬಾರದು. ಪರಿಶಿಷ್ಟ ಜಾತಿ / ಪಂಗಡದ ಅಭ್ಯರ್ಥಿಗಳ ವಯಸ್ಸು 20-04-2022 ಕ್ಕೆ 30 ವರ್ಷಕ್ಕಿಂತ ಮೀರಿರಬಾರದು.
  • ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಒಂದು ವಿಷಯವಾಗಿ ತೆಗೆದುಕೊಂಡಿದ್ದು ಮತ್ತು ಕನ್ನಡದಲ್ಲಿ ಓದಲು ಹಾಗೂ ಬರೆಯಲು ತಿಳಿದಿರಬೇಕು.
  • ಇಲೆಕ್ಟ್ರೀಷಿಯನ್ ವೃತ್ತಿಯಲ್ಲಿ ವ್ಯಾಸಂಗ ಮಾಡಿ ಉತ್ತೀರ್ಣರಾಗಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಭರ್ತಿ ಮಾಡಿದ ಅರ್ಜಿ ಸಲ್ಲಿಸಬೇಕಾದ ವಿಳಾಸ :
ಕಾರ್ಯನಿರ್ವಾಹಕ ಇಂಜಿನಿಯರರು, ಕೈಗಾರಿಕಾ ತರಬೇತಿ ಕೇಂದ್ರ (ಐಟಿಸಿ), ಹೆಸ್ಕಾಂ, ವಿದ್ಯುತ್ ನಗರ, ಕಾರವಾರ ರಸ್ತೆ, ಹುಬ್ಬಳ್ಳಿ-24.

-ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 20-05-2022 ರ ಸಂಜೆ 04 ಗಂಟೆಯೊಳಗೆ.
-ಅರ್ಜಿಯನ್ನು ನಿಗದಿತ ದಿನಾಂಕದೊಳಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಕಳುಹಿಸಬಹುದಾಗಿದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  20-05-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

 

Telegram Group
error: Content is protected !!