ಹೊಸ ನೇಮಕಾತಿ ಅಧಿಸೂಚನೆ 2023
KLA Recruitment 2023 : ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಸ್ಥಳೀಯ ವೃಂದದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದವರಿಗಾಗಿ ಗುರುತಿಸಲಾದ ವಾಹನ ಚಾಲಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಸ್ಥಳೀಯ ವೃಂದದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದವರಿಗಾಗಿ ಗುರುತಿಸಲಾದ ವಾಹನ ಚಾಲಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕ ವಿಧಾನಸಭೆ ಸಚಿವಾಲಯ – KLA |
ಹುದ್ದೆಗಳ ಹೆಸರು: | ವಾಹನ ಚಾಲಕರು |
ಒಟ್ಟು ಹುದ್ದೆಗಳು | ಒಟ್ಟು 3 ಹುದ್ದೆಗಳ ಭರ್ತಿ |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ |
ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು 7ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಇತ್ತೀಚಿನ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು.
– ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷಗಳು
– ಪ್ರವರ್ಗ 2ಎ, 2ಬಿ, 3ಎ, 3ಬಿ ಸೇರಿದ ಅಭ್ಯರ್ಥಿಗಳಿಗೆ – ಗರಿಷ್ಠ 38ವರ್ಷಗಳು
– ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷಗಳು
ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಪ. ಜಾತಿ, ಪ. ಪಂ ಹಾಗೂ ಪ್ರ1 ರ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ. ಉಳಿದ ಸಾಮಾನ್ಯ ವರ್ಗದ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಕ್ರಾಸ್ ಮಾಡಿದ ರೂ. 500 ರ ಇಂಡಿಯನ್ ಪೋಸ್ಟಲ್ ಆರ್ಡರ್ ಅನ್ನು ಅಧಿಸೂಚನೆ ಹೊರಡಿಸಿರುವ ದಿನಾಂಕದಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಿರುವಂತೆ ಖರೀದಿಸಿ, ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು – 560001 ಈ ವಿಳಾಸಕ್ಕೆ ಪಾವತಿ ಮಾಡಬೇಕು.
ಆಯ್ಕೆ ವಿಧಾನ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಲಿಖಿತ ಪರೀಕ್ಷೆ ಅಥವಾ ಮೌಖಿಕ ಪರೀಕ್ಷೆ ಅಥವಾ ಈ ಎರಡೂ ವಿಧಾನಗಳನ್ನು ಅನುಸರಿಸಿ ಯೋಗ್ಯ ಅಭ್ಯರ್ಥಿಗಳ ಆಯ್ಕೆಯನ್ನು ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಳಾಸ :
ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ 5074, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು – 560001
ಅರ್ಜಿ ಫಾರ್ಮ್ ಬೇಕಾದಲ್ಲಿ ಸರ್ಕಾರಿ ಮುದ್ರಣಾಲಯದಲ್ಲಿ ದೊರೆಯುತ್ತದೆ
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಆಗಸ್ಟ್ 05, 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಸೆಪ್ಟೆಂಬರ್ 08, 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |