ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಪ್ಯೂನ್ ಹಾಗೂ ವಿವಿಧ ಹುದ್ದೆಗಳ ನೇಮಕಾತಿ 2023 – District Court Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Dakshina Kannada District Court Recruitment 2023 : ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಜಿಲ್ಲಾ ನ್ಯಾಯಾಲಯ – District Court 
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 54
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ:

ಶೀಘ್ರಲಿಪಿಗಾರರು ಗ್ರೇಡ್ 3 ಹುದ್ದೆಗಳಿಗೆ ಅಭ್ಯರ್ಥಿಗಳು ಅಭ್ಯರ್ಥಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ (ಸೀನಿಯರ ಗ್ರೇಡ) ಮತ್ತು ಬೆರಳಚ್ಚು ಹಿರಿಯ ದರ್ಜೆ (ಸೀನಿಯರ ಗ್ರೇಡ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಪದವಿಯೊಂದಿಗೆ ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿ ಹಾಗೂ ಬೆರಳಚ್ಚು ವಿಷಯವನ್ನು ಐಚ್ಚಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಬೆರಳಚ್ಚುಗಾರರು ಹುದ್ದೆಗಳಿಗೆ ಅಭ್ಯರ್ಥಿಗಳು ಅಭ್ಯರ್ಥಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಹಿರಿಯ ದರ್ಜೆ (ಸೀನಿಯರ ಗ್ರೇಡ) ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಬೆರಳಚ್ಚು ನಕಲುಗಾರರು ಹುದ್ದೆಗಳಿಗೆ ಅಭ್ಯರ್ಥಿಗಳು ಅಭ್ಯರ್ಥಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಕಿರಿಯ ದರ್ಜೆ (ಜೂನಿಯರ್ ಗ್ರೇಡ) ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಜವಾನ ಹುದ್ದೆಗಳಿಗೆ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಪ.ಜಾತಿ, ಪ. ವರ್ಗ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ

ವೇತನಶ್ರೇಣಿ:
ಶೀಘ್ರಲಿಪಿಗಾರರು ಗ್ರೇಡ್ 3 ರೂ.27650-ರೂ.52650/-
ಬೆರಳಚ್ಚುಗಾರರು ರೂ.21400-ರೂ.42000/-
ಬೆರಳಚ್ಚು ನಕಲುಗಾರರು ರೂ.21400/–ರೂ.42000/-
ಜವಾನ ರೂ.17000-ರೂ.28950/-

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 200
• ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು – ಶುಲ್ಕ ವಿನಾಯಿತಿ ನೀಡಲಾಗಿದೆ.
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.)

ಆಯ್ಕೆ ವಿಧಾನ:
• ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಅಭ್ಯರ್ಥಿಗಳು ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಬೆರಳಚ್ಚು ಯಂತ್ರ/ ಕಂಪ್ಯೂಟರ್ ನಲ್ಲಿ ಬೆರಳಚ್ಚು ಮಾಡಿಸಿ ಅರ್ಹತಾ ಪರೀಕ್ಷೆ ನಡೆಸಲಾಗುವುದು.
• ಜವಾನ ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 06 ನವೆಂಬರ್ 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – 05 ಡಿಸೆಂಬರ್ 2023

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ 06 ನವೆಂಬರ್ 2023 ರಿಂದ ಆರಂಭ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button