ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

12ನೇ ಪಾಸ್ ಆದವರಿಗೆ 2006 ಹುದ್ದೆಗಳು । SSC Stenographer Recruitment 2024 – Complete Details

ಹೊಸ ನೇಮಕಾತಿ ಅಧಿಸೂಚನೆ 2024

SSC Stenographer Recruitment 2024 – ಸಿಬ್ಬಂದಿ ನೇಮಕಾತಿ ಆಯೋಗ (ಸ್ಟಾಫ್ ಸೆಲೆಕ್ಷನ್ ಕಮಿಷನ್ SSC) ಎಸ್ ಎಸ್ ಸಿ ಇಂದ 2006  SSC Stenographer ಹುದ್ದೆಗಳ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

  1. SSC Stenographer Recruitment 2024 – ಸಿಬ್ಬಂದಿ ನೇಮಕಾತಿ ಆಯೋಗ (ಸ್ಟಾಫ್ ಸೆಲೆಕ್ಷನ್ ಕಮಿಷನ್ SSC) ಎಸ್ ಎಸ್ ಸಿ ಇಂದ 2006  SSC Stenographer ಹುದ್ದೆಗಳ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರುಸಿಬ್ಬಂದಿ ನೇಮಕಾತಿ ಆಯೋಗ (ಸ್ಟಾಫ್ ಸೆಲೆಕ್ಷನ್ ಕಮಿಷನ್ SSC)
ಹುದ್ದೆಗಳ ಹೆಸರು ಸ್ಟೆನೋಗ್ರಾಫರ್ 
ಒಟ್ಟು ಹುದ್ದೆಗಳು2006 ಹುದ್ದೆಗಳು 
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) 
ಉದ್ಯೋಗ ಸ್ಥಳ 
ಭಾರತಾದ್ಯಂತ 

 

ವಿದ್ಯಾರ್ಹತೆ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ/ ತತ್ಸಮಾನ ವಿದ್ಯಾರ್ಹತೆ ಹಾಗೂ ನಿಗದಿತ ಟೈಪಿಂಗ್ ಜ್ಞಾನ ಹೊಂದಿರಬೇಕು.

ವಯೋಮಿತಿ:
ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಹುದ್ದೆಗಳಿಗೆ – ಗರಿಷ್ಠ 30 ವರ್ಷ
ಸ್ಟೆನೋಗ್ರಾಫರ್ ಗ್ರೇಡ್ ‘ಡಿ’ ಹುದ್ದೆಗಳಿಗೆ – ಗರಿಷ್ಠ 27 ವರ್ಷ

ವಯೋಮಿತಿ ಸಡಿಲಿಕೆ :
ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ ಸಡಿಲಿಕೆ
ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – 05 ವರ್ಷ ಸಡಿಲಿಕೆ
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ ಸಡಿಲಿಕೆ

ಅರ್ಜಿ ಶುಲ್ಕ:
ರೂ. 100 ಶುಲ್ಕವನ್ನು ಪಾವತಿಸಬೇಕು.
ಎಸ್ಸಿ, ಎಸ್ಟಿ, ಅಂಗವಿಕಲ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸ್ಕಿಲ್ ಟೆಸ್ಟ್ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು.

ಕರ್ನಾಟಕದ ಪರೀಕ್ಷಾ ಕೇಂದ್ರಗಳು :
ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 26 ಜುಲೈ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 17 ಆಗಸ್ಟ್ 2024
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

 

close button