ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

KKRTC ನೇಮಕಾತಿ ಅಧಿಸೂಚನೆ 2024 – KKRTC Recruitment 2024 – Complete Details

ಹೊಸ ನೇಮಕಾತಿ ಅಧಿಸೂಚನೆ 2024

KKRTC Recruitment 2024 walk in interview for Driver Technical Asistant Posts – ಬೀದರ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ, ಜಿಲ್ಲಾಧಿಕಾರಿಗಳ ಕಛೇರಿ, ಬೀದರ ರವರ ಮೂಲಕ ಹೊರಗುತ್ತಿಗೆಯ ಮೇಲೆ ನಿಯೋಜಿಸಿಕೊಳ್ಳಲು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬೀದರ ವಿಭಾಗದ ವ್ಯಾಪ್ತಿಯ ಘಟಕಗಳ ಬಸ್ ಚಾಲನೆಗೆ ಚಾಲಕರು ಹಾಗೂ ವಾಹನಗಳ ನಿರ್ವಹಣೆಗೆ ತಾಂತ್ರಿಕ ಸಹಾಯಕರು ಬೇಕಿರುವದರಿಂದ ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ Walk in Interview ಅನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

KKRTC Recruitment 2024 – ಬೀದರ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ, ಜಿಲ್ಲಾಧಿಕಾರಿಗಳ ಕಛೇರಿ, ಬೀದರ ರವರ ಮೂಲಕ ಹೊರಗುತ್ತಿಗೆಯ ಮೇಲೆ ನಿಯೋಜಿಸಿಕೊಳ್ಳಲು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬೀದರ ವಿಭಾಗದ ವ್ಯಾಪ್ತಿಯ ಘಟಕಗಳ ಬಸ್ ಚಾಲನೆಗೆ ಚಾಲಕರು ಹಾಗೂ ವಾಹನಗಳ ನಿರ್ವಹಣೆಗೆ ತಾಂತ್ರಿಕ ಸಹಾಯಕರು ಬೇಕಿರುವದರಿಂದ ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ Walk in Interview ಅನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

KKRTC Recruitment 2024

ಉದ್ಯೋಗ ವಿವರಗಳು
ಇಲಾಖೆ ಹೆಸರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC)
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 150
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) ಆಫ್ಲೈನ್ (Offline)
ಉದ್ಯೋಗ ಸ್ಥಳ –ಬೀದರ್ – ಕರ್ನಾಟಕ 

ವಿದ್ಯಾರ್ಹತೆ 
ಚಾಲಕ
ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಜೊತೆಗೆ ಭಾರೀ ಪ್ರಯಾಣಿಕ/ಸರಕು ವಾಹನವನ್ನು ಓಡಿಸಲು ಎರಡು ವರ್ಷಗಳ HTV (Heavy Transport Vehicle) ಲೈಸೆನ್ಸ್ ಮತ್ತು ಕರ್ನಾಟಕ ಬ್ಯಾಡ್ಜ್ ಹೊಂದಿರಬೇಕು.

ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಜೊತೆಗೆ ಐ.ಟಿ.ಐ./ಐ.ಟಿ.ಸಿ./ಎನ್.ಎ.ಸಿ ಯನ್ನು ಮೆಕ್ಯಾನಿಕ್ (ಮೋಟಾರ್ ವೆಹಿಕಲ್)/ಡಿಸೇಲ್ ಮೆಕ್ಯಾನಿಕ್/ಆಟೋ ಇಲೆಕ್ಟ್ರಿಷಿಯನ್/ವೆಲ್ಡರ್/ಶೀಟ್ ಮೆಟಲ್ ವರ್ಕರ್/ಇಲೆಕ್ಟ್ರಾನಿಕ್ ಮೆಕ್ಯಾನಿಕ್/ಅಪ್ಹೋಲ್ಸ್ಟರಿ/ಡ್ರಾಪ್ಟ್ ಮನ್ (ಮೆಕ್ಯಾನಿಕ್)/ಫಿಟ್ಟರ್/ಮಶಿನಿಷ್ಟ್/ಟೈರ್ ಫಿಟ್ಟಿಂಗ್/ಪೇಂಟಿಂಗ್/ರೆಫ್ರಿಜರೇಷನ್ & ಏರ್ ಕಂಡೀಷನಿಂಗ್/ಟರ್ನರ್/ಆಟೋಮೊಬೈಲ್/ಇಲೆಕ್ಟ್ರಿಕಲ್/ಇಲೆಕ್ಟ್ರಾನಿಕ್ಸ್/ಪ್ಯಾಬ್ರಿಕೇಷನ್ ಹೊಂದಿರಬೇಕು.

ವಯೋಮಿತಿ
ಚಾಲಕ ಹುದ್ದೆಗೆ ಕನಿಷ್ಠ 24 ವರ್ಷ ಹಾಗೂ 07/12/2024ಕ್ಕೆ ತಾಂತ್ರಿಕ ಸಹಾಯಕ ಹುದ್ದೆಗೆ ಕನಿಷ್ಠ 18 ವರ್ಷ ಪೂರೈಸಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನಶ್ರೇಣಿ
ಚಾಲಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.16973/-
ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.16550/-

ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ
ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಸಂದರ್ಶನ ಸ್ಥಳ :
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ಕಛೇರಿ, ಬೀದರ್

KKRTC Recruitment 2024

ಪ್ರಮುಖ ದಿನಾಂಕಗಳು 
ಚಾಲಕ ಹುದ್ದೆಗೆ ನೇರ ಸಂದರ್ಶನ ದಿನಾಂಕಡಿಸೆಂಬರ್ 02, 2024 ರಿಂದ ಡಿಸೆಂಬರ್ 04, 2024
ತಾಂತ್ರಿಕ ಸಹಾಯಕ ಹುದ್ದೆಗೆ ನೇರ ಸಂದರ್ಶನ ದಿನಾಂಕಡಿಸೆಂಬರ್ 06, 2024 ರಿಂದ ಡಿಸೆಂಬರ್ 07, 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

close button