ಹೊಸ ನೇಮಕಾತಿ ಅಧಿಸೂಚನೆ 2025
ESIC Recruitment 2025 – Apply for 558 Specialist Posts – ESIC ನೇಮಕಾತಿ 2025: ಭಾರತದೆಲ್ಲೆಡೆ 558 ಸ್ಪೆಷಲಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ESIC (ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ) ತನ್ನ ವಿವಿಧ ವಿಭಾಗಗಳಲ್ಲಿ ಸೀನಿಯರ್ ಮತ್ತು ಜೂನಿಯರ್ ಸ್ಪೆಷಲಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಒಟ್ಟು 558 ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು 2025ರ ಮೇ 26ರೊಳಗೆ ಅಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ESIC ನೇಮಕಾತಿ 2025: ಭಾರತದೆಲ್ಲೆಡೆ 558 ಸ್ಪೆಷಲಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ESIC (ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ) ತನ್ನ ವಿವಿಧ ವಿಭಾಗಗಳಲ್ಲಿ ಸೀನಿಯರ್ ಮತ್ತು ಜೂನಿಯರ್ ಸ್ಪೆಷಲಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಒಟ್ಟು 558 ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು 2025ರ ಮೇ 26ರೊಳಗೆ ಅಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ನೇಮಕಾತಿ ವಿವರ
ಸಂಸ್ಥೆಯ ಹೆಸರು ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC)
ಹುದ್ದೆಯ ಹೆಸರು ಸೀನಿಯರ್ ಮತ್ತು ಜೂನಿಯರ್ ಸ್ಪೆಷಲಿಸ್ಟ್
ಒಟ್ಟು ಹುದ್ದೆಗಳ ಸಂಖ್ಯೆ 558
ಉದ್ಯೋಗ ಸ್ಥಳ ಭಾರತಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ ಅಫ್‌ಲೈನ್ (ಅಂಚೆ ಮೂಲಕ ಅರ್ಜಿ ಕಳುಹಿಸಬೇಕು)
ಹುದ್ದೆಗಳ ವಿವರ
ಸೀನಿಯರ್ ಸ್ಪೆಷಲಿಸ್ಟ್ ಹುದ್ದೆಗಳು 155
ಜೂನಿಯರ್ ಸ್ಪೆಷಲಿಸ್ಟ್ ಹುದ್ದೆಗಳು 403
ಒಟ್ಟು ಹುದ್ದೆಗಳ ಸಂಖ್ಯೆ 558
ವಿದ್ಯಾರ್ಹತೆ
ಈ ಹುದ್ದೆಗಳಿಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಎ, ಎಂಎಸ್, ಎಂಎಸ್‌ಸಿ, ಡಿಎಸ್‌ಸಿ, ಡಿಎ, ಎಂ.ಸಿ.ಎಚ್, ಡಿಪಿಎಂ, ಡಿಎಂಆರ್‌ಡಿ, ಡಿಎಂ ಅಥವಾ ಪಿಎಚ್‌ಡಿ ಪದವಿಗಳು ಪಡೆದಿರಬೇಕು.
ವಯೋಮಿತಿ
ಅಭ್ಯರ್ಥಿಯ ಗರಿಷ್ಠ ವಯಸ್ಸು 45 ವರ್ಷಗಳೊಳಗೆ ಇರಬೇಕು (2025ರ ಮೇ 26ಕ್ಕೆ.)
ವಯೋಮಿತಿಯಲ್ಲಿ ಸಡಿಲಿಕೆಗಳು – ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ (ಸಾಮಾನ್ಯ) 10 ವರ್ಷ, ಅಂಗವಿಕಲ (ಒಬಿಸಿ ) 13 ವರ್ಷ, ಅಂಗವಿಕಲ (ಎಸ್ಸಿ/ಎಸ್ಟಿ) 15 ವರ್ಷ
ಹೊಸ ಉದ್ಯೋಗ ಸುದ್ದಿ – SSLC ಪಾಸ್ ಆದವರಿಗೆ 9970 ಸಹಾಯಕ ಲೊಕೊ ಪೈಲಟ್ ಬೃಹತ್ ನೇಮಕಾತಿ 2025
ವೇತನದ ಮಾಹಿತಿ
ಸೀನಿಯರ್ ಸ್ಪೆಷಲಿಸ್ಟ್ ಹುದ್ದೆಗೆ ಮಾಸಿಕ ರೂ. 78,800/-
ಜೂನಿಯರ್ ಸ್ಪೆಷಲಿಸ್ಟ್ ಹುದ್ದೆಗೆ ಮಾಸಿಕ ರೂ. 67,700/-
ಅರ್ಜಿ ಶುಲ್ಕ
ಮಹಿಳಾ, ಎಸ್ಸಿ/ಎಸ್ಟಿ, ಅಂಗವಿಕಲ, ಮಾಜಿ ಸೈನಿಕರು ಮತ್ತು ESIC ನ ನೌಕರರಿಗೆ ಶುಲ್ಕವಿಲ್ಲ
ಇತರ ಎಲ್ಲಾ ಅಭ್ಯರ್ಥಿಗಳಿಗೆ ರೂ. 500/-
ಪಾವತಿ ವಿಧಾನ ಡಿಮ್ಯಾಂಡ್ ಡ್ರಾಫ್ಟ್ ಅಥವಾ ಬ್ಯಾಂಕರ್ ಚೆಕ್
ಆಯ್ಕೆ ವಿಧಾನ
ಅಭ್ಯರ್ಥಿಗಳ ಆಯ್ಕೆ ಲೇಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದಲ್ಲಿ ನಡೆಯಲಿದೆ.
📝 ಅರ್ಜಿ ಸಲ್ಲಿಸುವ ವಿಧಾನ
ಅಧಿಕೃತ ಅಧಿಸೂಚನೆಯನ್ನು ಓದಿ ಮತ್ತು ಅರ್ಹತೆ ಖಚಿತಪಡಿಸಿಕೊಳ್ಳಿ. ಅರ್ಜಿಯ ನಮೂನೆಯನ್ನು ಡೌನ್‌ಲೋಡ್ ಮಾಡಿ, ಅಗತ್ಯ ವಿವರಗಳನ್ನು ಭರ್ತಿ ಮಾಡಿ. ಸ್ವಯಂ ದೃಢೀಕರಿತ ದಾಖಲೆಗಳ ಪ್ರತಿಗಳನ್ನು ಲಗತ್ತಿಸಿ. ಅರ್ಜಿಗೆ ಸಂಬಂಧಿಸಿದ ಶುಲ್ಕ ಪಾವತಿಸಿ (ಅನ್ವಯವಾಗುವವರೆಗೂ). ಎಲ್ಲಾ ವಿವರಗಳ ಪರಿಶೀಲನೆಯ ನಂತರ ಅರ್ಜಿಯನ್ನು Speed Post/Registered Post ಮೂಲಕ ನಿಗದಿತ ವಿಳಾಸಕ್ಕೆ ಕಳುಹಿಸಿ. ಅರ್ಜಿ ಕಳುಹಿಸಲು ಕೊನೆಯ ದಿನಾಂಕ 26-ಮೇ-2025. ದೂರದ ಪ್ರದೇಶದ ಅಭ್ಯರ್ಥಿಗಳಿಗೆ ಕೊನೆಯ ದಿನಾಂಕ 02-ಜೂನ್-2025.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಪ್ರಾರಂಭ 08 ಏಪ್ರಿಲ್ 2025
ಕೊನೆಯ ದಿನಾಂಕ 26 ಮೇ 2025
ದೂರದ ಪ್ರದೇಶಗಳ ಕೊನೆಯ ದಿನಾಂಕ 02 ಜೂನ್ 2025
🔗 ಪ್ರಮುಖ ಲಿಂಕುಗಳು
ನೋಟಿಫಿಕೇಶನ್ (ಅಧಿಸೂಚನೆ) / ಅರ್ಜಿ ಫಾರ್ಮ್ : ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
ನಮ್ಮ ಯೂಟ್ಯೂಬ್ ಚಾನೆಲ್ ನೋಡಿ: ಇಲ್ಲಿ ಕ್ಲಿಕ್ ಮಾಡಿ