ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್!

ನಿರುದ್ಯೋಗಿಗಳಿಗೆ ಹೊಸ ಉದ್ಯೋಗಗಳು 

 

ಕಲಬುರಗಿ: ಈ ಭಾಗದಲ್ಲಿ ಹೆಚ್ಚಾಗಿ ಬೆಳೆಯುತ್ತಿರುವ ಜೋಳ, ತೊಗರಿ ಹಾಗೂ ಹೆಸರು ಕಾಳುಗಳನ್ನು ಖರೀದಿಸಿ ನ್ಯಾಯಬೆಲೆ ಅಂಗಡಿ ಮೂಲಕ ವಿತರಿಸಲು ಕ್ರಮಕೈಗೊಳ್ಳುವುದಾಗಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ವಿ. ಕತ್ತಿ ಅವರು ಭರವಸೆ ನೀಡಿದ್ದಾರೆ.

ಕಲಬುರಗಿ ನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ 72ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು.


 

ಹಾಗೆಯೇ ದಕ್ಷಿಣ ಕರ್ನಾಟಕದ ಪ್ರಮುಖ ಆಹಾರ ಬೆಳೆಯಾಗಿರುವ ರಾಗಿ ಧಾನ್ಯವನ್ನೂ ಪಡಿತರಕ್ಕೆ ಸೇರ್ಪಡೆ ಮಾಡಲಿದ್ದು, ಏಪ್ರಿಲ್ 1 ರಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ಈ ಆಹಾರ ಧಾನ್ಯಗಳ ವಿತರಣೆ ಮಾಡಲು ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ.

ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಪಡಿತರ ಕಾರ್ಡ್ ಹೊಂದಿರುವ ಪ್ರತಿ ಕುಟುಂಬಕ್ಕೂ 1 ಕೆಜಿ ಬೆಲ್ಲ ಕೊಡಲು ಕ್ರಮ ಕೈಗೊಳ್ಳುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಪತ್ರ ಬರೆದಿದ್ದಾರೆ.

 

 

ಅಲೆಮನೆಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಗಿದ್ದು, ಕೇರಳ ಮತ್ತು ತಮಿಳುನಾಡಿನಲ್ಲಿ ಪಡಿತರ ಮೂಲಕ ಸಕ್ಕರೆ ಬದಲು ಬೆಲ್ಲ ನೀಡುವ ವ್ಯವಸ್ಥೆ ಜಾರಿಗೆ ತಂದಿದ್ದಾರೆ. ಅದೇ ರೀತಿ ಕರ್ನಾಟಕದಲ್ಲಿಯೂ ಪಡಿರ ಮೂಲಕ ಒಂದು ಕೆಜಿ ಬೆಲ್ಲ ನೀಡುವ ವ್ಯವಸ್ಥೆ ಜಾರಿಗೆ ತಂದರೆ ಆತ್ಮ ನಿರ್ಭರ ಯೋಜನೆಯಡಿಯಲ್ಲಿ ಅಲೆಮನೆಗಳ ಪುನಶ್ಚೇತನ ಮಾಡಿದಂತಾಗುತ್ತದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

 

ನಿರುದ್ಯೋಗಿಗಳಿಗೆ ಹೊಸ ಉದ್ಯೋಗಗಳು 

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

Scroll to Top