ಉದ್ಯೋಗ ಸುದ್ದಿ
ಗುಲ್ಬರ್ಗಾ ವಿಧುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದ (GESCOM) ಕೈಗಾರಿಕಾ ತರಬೇತಿ ಕೇಂದ್ರ, ಕಲಬುರಗಿಯಲ್ಲಿ ನಡೆಸುವ 2020-21 ನೇ ಸಾಲಿನ ವರ್ಷದ ಎಲೆಕ್ಟ್ರಿಷಿಯನ್ ವೃತ್ತಿಯಲ್ಲಿ ಒಟ್ಟು 205 ಅಪ್ಪ್ರೆಂಟಿಸ್ ತರಬೇತಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ದಿನಾಂಕ ಫೆಬ್ರುವರಿ 26, 2021 ರಿಂದ ಮಾರ್ಚ್ 18, 2021 ರವರೆಗೆ ಅಂಚೆ ಮೂಲಕ ಅಥವಾ ನೇರವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಒಟ್ಟು ಹುದ್ದೆಗಳು: 205
ಉದ್ಯೋಗ ಸ್ಥಳ: Karnataka
ವಿದ್ಯಾರ್ಹತೆ:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 2 ವರ್ಷದ ITI ಕೋರ್ಸ್ ನ ಪ್ರಮಾಣಪತ್ರವನ್ನು ಹೊಂದಿರಬೇಕು.
ವಯೋಮಿತಿ:
ಅಭ್ಯರ್ಥಿಗಳು ಕನಿಷ್ಠ 16 ವರ್ಷ ಪೂರೈಸಿರಬೇಕು ಹಾಗು ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
ಮೀಸಲಾತಿಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ವೇತನ ಶ್ರೇಣಿ:
ಈ ಶಿಶುಕ್ಷು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 7,000/- ರೂಪಾಯಿ ವೇತನ ಪಡೆಯಲಿದ್ದಾರೆ.
ಆಸಕ್ತ ಅಭ್ಯರ್ಥಿಗಳು ಅಂಚೆ ಅಥವಾ ನೇರವಾಗಿ ಎಲ್ಲ ಮೂಲ ಧಾಖಲೆಗಳೊಂದಿಗೆ ಈ ಕೆಳಗೆ ನೀಡಿರುವ ವಿಳಾಸಕ್ಕೆ ಕೊನೆಯ ದಿನಾಂಕದೊಳಗಾಗಿ ತಲುಪುವಂತೆ ಅರ್ಜಿ ಸಲ್ಲಿಸಬೇಕು.
* ಕಚೇರಿಯ ವಿಳಾಸ :
ಪ್ರಧಾನ ವ್ಯವಸ್ಥಾಪಕರು ಜೆಸ್ಕಾಂ, ನಿಗಮ ಕಛೇರಿ, ಕಲಬುರಗಿ.
ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಈ ಕೆಳಗೆ ನೀಡಿರುವ ಅಧಿಸೂಚನೆಯೊಂದಿಗೆ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 26 ಫೆಬ್ರುವರಿ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18 ಮಾರ್ಚ್ 2021