ಉದ್ಯೋಗ ಸುದ್ದಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಜಿಲ್ಲೆಗಳಲ್ಲಿ ಖಾಲಿ ಇರುವ 189 ತಾಂತ್ರಿಕ ಸಹಾಯಕರು (ಕೃಷಿ/ಅರಣ್ಯ/ತೋಟಗಾರಿಕೆ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಬಿ.ಎಸ್ಸಿ ಮತ್ತು ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಈ ಹುದ್ದೆಗಳಿಗೆ ಕನಿಷ್ಟ 21 ವರ್ಷಗಳು ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವೇತನ ಶ್ರೇಣಿ:
ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ನಡೆಸಲಾಗುವುದು ಮತ್ತು ನಿಗದಿತ ಮಾನದಂಡಗಳಂತೆ ತಾತ್ಕಾಲಿಕ ಮೆರಿಟ್ ಪಟ್ಟಿ ತಯಾರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮಾರ್ಚ್ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 04 ಮಾರ್ಚ್ 2021
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 25 ಮಾರ್ಚ್ 2021
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.