ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಮಂಡ್ಯದಲ್ಲಿ ಖಾಲಿ ಇರುವ ಬೆರಳಚ್ಚುಗಾರರ ಮತ್ತು ಶೀಘ್ರಲಿಪಿಗಾರರ ನೇರ ನೇಮಕಾತಿಗಾಗಿ ಮಂಡ್ಯ ಘಟಕದಲ್ಲಿ ಹಿಂಬಾಕಿ ಇರುವ 7 ಮತ್ತು ಹೊಸದಾಗಿ ಅನುಮತಿಸಲಾದ ಒಂದು ಸೇರಿ ಒಟ್ಟು 8 ಬೆರಳಚ್ಚುಗಾರರ ಹುದ್ದೆಗಳಿಗೆ ಮತ್ತು ಶೀಘ್ರಲಿಪಿಗಾರ – 10 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.
* ಹುದ್ದೆಗಳ ವಿವರ :
– ಬೆರಳಚ್ಚುಗಾರ – 08
– ಶೀಘ್ರಲಿಪಿಗಾರ – 10
ಓಟು ಹುದ್ದೆಗಳು: 18
ಉದ್ಯೋಗ ಸ್ಥಳ: ಮಂಡ್ಯ
ವಿದ್ಯಾರ್ಹತೆ:
– ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣತೆ ಮತ್ತು ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಹಿರಿಯಶ್ರೇಣಿ ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣತೆ ಹೊಂದಿರಬೇಕು.
ವಯೋಮಿತಿ:
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.
ಗರಿಷ್ಟ ವಯೋಮಿತಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 35 ವರ್ಷ
2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ : 38 ವರ್ಷ
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ- 1 ರ ಅಭ್ಯರ್ಥಿಗಳಿಗೆ : 40 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ 200/-
ಪ್ರವರ್ಗ 2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳಿಗೆ ರೂ 100/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 21400/- ವೇತನ ಹಾಗೂ ಇತರೆ ಭತ್ಯೆಗಳನ್ನು ಪಡೆಯುವರು.
ಆಯ್ಕೆ ವಿಧಾನ:
– 15 ನಿಮಿಷಗಳ ಉಕ್ತಲೇಖ ಮತ್ತು ಸಂದರ್ಶನ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯುವುದು.
ಅರ್ಜಿ ಸಲ್ಲಿಸಬೇಕಾದ ವಿಳಾಸ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಡ್ಯ ಜಿಲ್ಲೆ, ಮಂಡ್ಯ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03-04-2021
ವೆಬ್ಸೈಟ್ – Website
ನೋಟಿಫಿಕೇಶನ್ – Notification