ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು 94 ಸಿವಿಲ್ ನ್ಯಾಯಾಧೀಶ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನಿಗದಿಪಡಿಸಿದ ಕೊನೆಯ ದಿನಾಂಕ ಏಪ್ರಿಲ್ 27,2021ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಒಟ್ಟು ಹುದ್ದೆಗಳು: 94
ಉದ್ಯೋಗ ಸ್ಥಳ: ಕರ್ನಾಟಕ
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಹಾಗೂ ಕಡ್ಡಾಯವಾಗಿ ವಕೀಲರಾಗಿ ನೋಂದಣಿ ಆಗಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಟ 35 ವರ್ಷ ವಯೋಮಿತಿಯೊಳಗಿನವರಾಗಿರಬೇಕು. ಇನ್ನು ಮೀಸಲಾತಿಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದ್ದು ಈ ಕುರಿತ ಮಾಹಿತಿಗೆ ಅಧಿಸೂಚನೆಯನ್ನು ಗಮನಿಸಿ
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳು ರೂಪಾಯಿ 500/- ಅರ್ಜಿ ಶುಲ್ಕ ಪಾವತಿಸಬೇಕು, ಮತ್ತು ಪ.ಜಾ/ಪ.ಪಂ/ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 27,700/- ರಿಂದ 44,770/-ರೂ ವೇತನ ಪಡೆಯಬಹುದು.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಮೌಖಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27 ಮಾರ್ಚ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27 ಎಪ್ರಿಲ್ 2021
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 27 ಎಪ್ರಿಲ್ 2021
Website
Notification
Apply Online