ಮಹಾತ್ಮಗಾಂಧಿ ನರೇಗಾ ಯೋಜನಡೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಹಾಗೂ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 25 ‘ಗ್ರಾಮ ಕಾಯಕ ಮಿತ್ರ’ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಂಹ್ಯರ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಮ ಕಾಯಕ ಮಿತ್ರ’ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಆಯಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸತಕ್ಕದ್ದು.
ಒಟ್ಟು ಹುದ್ದೆಗಳು: 25
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
ದಿನಾಂಕ ಜನವರಿ 1, 2021ರ ಅನ್ವಯ ಗರಿಷ್ಠ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಆಸಕ್ತ ಅಭ್ಯರ್ಥಿಗಳು ಗ್ರಾಮ ಪಂಚಾಯಿತಿಯಲ್ಲಿ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ನಿಗದಿಪಡಿಸಿದ ಕೊನೆಯ ದಿನಾಂಕಏಪ್ರಿಲ್ 10,2021ರ ಸಂಜೆ 5:00 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30 ಮಾರ್ಚ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 ಎಪ್ರಿಲ್ 2021