ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 28 ಮೇ 2021 ರೊಳಗಾಗಿ ಆನ್ ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಕೋವಿಡ್ ಎರಡನೇ ಅಲೆಯನ್ನು ತಡೆಗಟ್ಟುವ ಸಲುವಾಗಿ ಸರ್ಕಾರ ಲಾಕ್‌ಡೌನ್ ವಿಸ್ತರಣೆ ಮಾಡಿದ ಹಿನ್ನೆಲೆಯಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅನಾನುಕೂಲವಾಗಿರುವುದರಿಂದ ಜೂನ್ 29 ರವರೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 80 ವಿವಿಧ ಹುದ್ದೆಗಳಲ್ಲಿ ಆಸಕ್ತಿಯುಳ್ಳವರು ಈ ಕೆಳಗಿನ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ : ಒಟ್ಟು ಹುದ್ದೆಗಳು: 76 |
ವಿದ್ಯಾರ್ಹತೆ:
ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳು SSLC/ PUC / Degree / PG / ITI ಮುಗಿಸಿರಬೇಕು, ಈ ಕುರಿತು ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷಗಳ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಹಾಗೂ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳ ವರೆಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ₹500/- ಶುಲ್ಕ ಹಾಗೂ ಇತರೆ ಅಭ್ಯರ್ಥಿಗಳಿಗೆ ₹800 ರೂಪಾಯಿಗಳ ಶುಲ್ಕವನ್ನು ನಿಗದಿಪಡಿಸಲಾಗಿದೆ.
10th Pass Jobs 2021 |
Degree Pass Jobs 2021 |
7th Pass Jobs 2021 |
Diploma Pass Jobs 2021 |
ITI Pass Jobs 2021 |
PUC Pass Jobs 2021 |
ಆಯ್ಕೆ ವಿಧಾನ:
ನೇಮಕಾತಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಕನ್ನಡ ಭಾಷೆಗೆ 50 ಅಂಕಗಳು, ಸಾಮಾನ್ಯ ಇಂಗ್ಲಿಷ್‌ಗೆ ಸಂಬಂಧಿಸಿದಂತೆ 50 ಅಂಕಗಳು, ಸಾಮಾನ್ಯ ಜ್ಞಾನ ಕುರಿತು 25 ಅಂಕಗಳು, ಸಹಕಾರ ವಿಷಯಗಳಿಗೆ 50 ಅಂಕಗಳು, ಭಾರತ ಸಂವಿಧಾನ ಕುರಿತು 25 ಅಂಕಗಳು, ಸಂಸ್ಥೆಯ ಕಾರ್ಯಕ್ಷೇತ್ರ / ಉದ್ದೇಶ / ಕಾರ್ಯಚಟುವಟಿಕೆಗಳ ಕುರಿತು 25 ಅಂಕಗಳಿಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಒಟ್ಟು 200 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ.
ಪ್ರಮುಖ ದಿನಾಂಕಗಳು
ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 28-04-2021
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29-06-2021
ಆನ್‌ಲೈನ್ ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ: 30-06-2021 ರ ಸಂಜೆ 5-30 ರವರೆಗೆ.
Website Notification |