ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಕ್ಲರ್ಕ್ ಹುದ್ದೆಗಳಿಗೆ ನಡೆಸುವ ಪೂರ್ವಭಾವಿ ಪರೀಕ್ಷೆಗೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಎಸ್‌ಬಿಐ ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳಿಗೆ ಪ್ರಿಲಿಮ್ಸ್ ಪರೀಕ್ಷೆಯನ್ನು ಜುಲೈ 10, 11, 12, 13 ರಂದು ದೇಶದಾದ್ಯಂತ ವಿವಿಧ ಕೇಂದ್ರಗಳಲ್ಲಿ ನಡೆಸಲಿದೆ.
ಎಸ್‌ಬಿಐ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಬ್ಯಾಂಕ್‌ನ ಅಫೀಶಿಯಲ್ ವೆಬ್‌ಸೈಟ್ sbi.co.in ಗೆ ಭೇಟಿ ನೀಡಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಎಸ್‌ಬಿಐ ಕ್ಲರ್ಕ್ ಪ್ರಿಲಿಮಿನರಿ ಪರೀಕ್ಷೆ 2021 : ಜುಲೈ 10, 11, 12, 13, 2021
ಪ್ರವೇಶ ಪತ್ರ ಡೌನ್‌ಲೋಡ್ ಹೇಗೆ?
ಭಾರತೀಯ ಸ್ಟೇಟ್ ಬ್ಯಾಂಕ್‌ನ ಅಫೀಶಿಯಲ್ ವೆಬ್‌ಸೈಟ್ sbi.co.in/careers ಗೆ ಭೇಟಿ ನೀಡಿ.
ಓಪನ್ ಆದ ಪೇಜ್‌ನಲ್ಲಿ ‘Current Openings’ ಸೆಕ್ಷನ್‌ಗೆ ಹೋಗಿ.ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಅಡ್ಮಿಟ್ ಕಾರ್ಡ್‌ಗೆ ಸಂಬಂಧಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ. ನಂತರ ಓಪನ್ ಆಗುವ ಪೇಜ್‌ನಲ್ಲಿ ಅಗತ್ಯ ಮಾಹಿತಿಗಳನ್ನು ನೀಡಿ ಲಾಗಿನ್ ಆಗಿ.
– ಪ್ರವೇಶ ಪತ್ರ ಕಾಣಸಿಗುತ್ತೆ. ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.