ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (MESCOM) ನ ಹೆಚ್ಆರ್ಡಿ ಕೇಂದ್ರವು ಗ್ರಾಜುಯೇಟ್ ಅಪ್ರೆಂಟಿಸ್, ಟೆಕ್ನೀಷಿಯನ್ ಡಿಪ್ಲೊಮ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ:
* ಗ್ರಾಜುಯೇಟ್ ಅಪ್ರೆಂಟಿಸ್ (ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್) 125 ಹುದ್ದೆಗಳು
*ಟೆಕ್ನೀಷಿಯನ್ ಡಿಪ್ಲೊಮ ಅಪ್ರೆಂಟಿಸ್ (ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್) 75 ಹುದ್ದೆಗಳು
ವಿದ್ಯಾರ್ಹತೆ: ಹುದ್ದೆಗಳಿಗೆ ಅನುಗುಣವಾಗಿ ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಇಂಜಿನಿಯರಿಂಗ್ / ಡಿಪ್ಲೊಮ ಪಾಸ್ ಮಾಡಿರಬೇಕು.
ವಯೋಮಿತಿ: ಕೇಂದ್ರೀಯ ಅಪ್ರೆಂಟಿಸ್ ನಿಯಮಗಳ ಪ್ರಕಾರ ಅನ್ವಯವಾಗಲಿದೆ.
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ, ಪರ್ಸನಾಲಿಟಿ ಟೆಸ್ಟ್ ಮತ್ತು ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು
ಆನ್ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ 19-08-2021
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ(NATS ಪೋರ್ಟಲ್ನಲ್ಲಿ) 05-09-2021
ಮೆಸ್ಕಾಂ ವೆಬ್ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 09-09-2021
ಶಾರ್ಟ್ ಲಿಸ್ಟ್ ಬಿಡುಗಡೆ ದಿನಾಂಕ 14-09-2021
ಮೂಲಕ ದಾಖಲೆಗಳ ಪರಿಶೀಲನೆ ದಿನಾಂಕ 21-09-2021 ಮತ್ತು 23-09-2021
Website |
Notification |
Apply Link |