ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಒಟ್ಟು 190 ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 23-11-2021 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಒಟ್ಟು ಹುದ್ದೆಗಳು: 190
ವಿದ್ಯಾರ್ಹತೆ:
ಅಭ್ಯರ್ಥಿಗಳಿಗೆ ಯಾವುದೇ ಕನಿಷ್ಠ ವಿದ್ಯಾರ್ಹತೆ ನಿಗದಿಪಡಿಸಿಲ್ಲ. ಕನ್ನಡ ಮಾತನಾಡಲು ಗೊತ್ತಿರಬೇಕು ಜೊತೆಗೆ ಪೌರಕಾರ್ಮಿಕ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ, ದಿನಗೂಲಿ, ಗುತ್ತಿಗೆ ಮತ್ತು ಹೊರಗುತ್ತಿಗೆ ಕೆಲಸವನ್ನು ನಿರ್ವಹಿಸುತ್ತಿರಬೇಕು.
ವಯೋಮಿತಿ:
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಸಾಮಾನ್ಯ ಹಾಗೂ ಇತರೆ ವರ್ಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ಗರಿಷ್ಠ 45 ವರ್ಷ ವಯೋಮಿತಿ ಹೊಂದಿರತಕ್ಕದ್ದು.
ಅರ್ಜಿ ಶುಲ್ಕ:
SC / ST / ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ರೂ.100.
ಇತರೆ ಅಭ್ಯರ್ಥಿಗಳಿಗೆ ರೂ.200 ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ 17,000 ರಿಂದ 28,950 ವರೆಗೆವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ನೇಮಕಾತಿಯನ್ನು ಮಂಗಳೂರು ಮಹಾನಗರ ಪಾಲಿಕೆಗೆ ಮಾತ್ರ ಸೀಮಿತಗೊಳಿಸಲಾಗಿದೆ ಹಾಗೂ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕ್ಷೇಮಾಭಿವೃದ್ದಿ, ದಿನಗೂಲಿ, ಗುತ್ತಿಗೆ, ಹೊರಗುತ್ತಿಗೆ ಹಾಗೂ ಇತರೆ ಪೌರಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಪ್ರಥಮ ಆದ್ಯತೆ ನೀಡಲಾಗುವುದು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 7 ಅಕ್ಟೋಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23 ನವೆಂಬರ್ 2021
Website |
Notification |
Apply Online |
Mangalore Mahanagara Palike Recruitment 2021