ಭಾರತೀಯ ಆಹಾರ ನಿಗಮವು, ಹರಿಯಾಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಕಚೇರಿಗಳಲ್ಲಿ ಅಗತ್ಯ ವಾಚ್ಮನ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಸದರಿ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಬಹುದು. ಆನ್ಲೈನ್ ಅರ್ಜಿ ಸಲ್ಲಿಸಲು ನವೆಂಬರ್ 19 ರವರೆಗೆ ಅವಕಾಶ ಇರುತ್ತದೆ.
ನೇಮಕಾತಿ ಸಂಸ್ಥೆ : ಭಾರತೀಯ ಆಹಾರ ನಿಗಮ
ಹುದ್ದೆಯ ಹೆಸರು : ವಾಚ್ಮನ್
ಹುದ್ದೆಗಳ ಸಂಖ್ಯೆ : 380
ಹುದ್ದೆಯ ಸ್ಥಳ : ಹರಿಯಾಣ
ವಿದ್ಯಾರ್ಹತೆ : ಕನಿಷ್ಠ 8ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ವಯಸ್ಸು ಮೀರಿರಬಾರದು.
ಅರ್ಜಿ ಶುಲ್ಕ
ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.250.
SC / ST / PWD ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಪ್ರಮುಖ ದಿನಾಂಕಗಳು
ಆನ್ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 20-10-2021
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 19-11-2021 ರ ರಾತ್ರಿ 11:59 ರವರೆಗೆ.
ಪರೀಕ್ಷೆ ದಿನಾಂಕ : ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುತ್ತದೆ.
Website |
Notification |