ಭಾರತೀಯ ನೌಕಾಪಡೆಯಲ್ಲಿ ಫೆಬ್ರುವರಿ 2022 ನೇ ಸಾಲಿಗೆ ನೇಮಕ ಮಾಡಿಕೊಳ್ಳಲು ಸುಮಾರು 300 ನಾವಿಕ (Sailor) ಹುದ್ದೆಗಳ ನೇಮಕಕ್ಕೆ ಅರ್ಹ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿ ಪಡಿಸಿದ ಕೊನೆಯ ದಿನಾಂಕವಾದ 02-11-2021 ರೊಳಗಾಗಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಒಟ್ಟು ಹುದ್ದೆಗಳು: 300
ಉದ್ಯೋಗ ಸ್ಥಳ: ಭಾರತದಾದ್ಯಂತ
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ದಿನಾಂಕ01 ಏಪ್ರಿಲ್ 2002 ರಿಂದ 31 ಮಾರ್ಚ್ 2005ರ ಒಳಗೆ ಜನಿಸಿರಬೇಕು.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆಮತ್ತುಲಿಖಿತ ಪರೀಕ್ಷೆ ಗಳ ಮೂಲಕ ಆಯ್ಕೆ ಮಾಡಲಾಗುವದು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 29 ಅಕ್ಟೋಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 2 ನವೆಂಬರ್ 2021
ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Website |
Notification |