Vijayapura District Court Recruitment 2021 – Apply Online for 05 Stenographer Posts
ವಿಜಯಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಚೇರಿ, ವಿಜಯಪುರ ಇದರ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಗ್ರೇಡ್ III ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ ನವೆಂಬರ್ 30,2021 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಒಟ್ಟು ಹುದ್ದೆಗಳು: 5
ಉದ್ಯೋಗ ಸ್ಥಳ: ವಿಜಯಪುರ ಜಿಲ್ಲೆ
ವಿದ್ಯಾರ್ಹತೆ:
ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೋಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಹಾಗು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಪ್ರೌಢ ದರ್ಜೆಯ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗು ಗರಿಷ್ಟ 35 ವರ್ಷ,
ಪ್ರವರ್ಗ-2A,ಪ್ರವರ್ಗ-2B,ಪ್ರವರ್ಗ-3A ಮತ್ತು ಪ್ರವರ್ಗ 3B ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗು ಗರಿಷ್ಠ 38 ವರ್ಷ ಮತ್ತು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗು ಗರಿಷ್ಠ 40 ವರ್ಷ ವಯೋಮಿತಿಯೊಳಗಿರಬೇಕು.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.27,650/- ರಿಂದ 52,650/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, ಪ್ರವರ್ಗ 2A,2B,3A,3Bಗೆ ಸೇರಿದ ಅಭ್ಯರ್ಥಿಗಳು 200/-ರೂ ಮತ್ತು
SC /ST /CAT-1 ಹಾಗೂ ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30 ಅಕ್ಟೋಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ನವೆಂಬರ್ 2021
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 3 ಡಿಸೆಂಬರ್ 2021
Website |
Notification PDF |