ಸೌತ್ ಈಸ್ಟರ್ನ್ ರೈಲ್ವೆ(ಆಗ್ನೇಯ ರೈಲ್ವೆ) (South Eastern Railway) ಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1785 ಅಪ್ರೆಂಟಿಸ್(Apprentice) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 15ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ: ಆಗ್ನೇಯ ರೈಲ್ವೆ ಹುದ್ದೆಯ ಹೆಸರು: ಅಪ್ರೆಂಟಿಸ್ ಒಟ್ಟು ಹುದ್ದೆಗಳು: 1785 ವಿದ್ಯಾರ್ಹತೆ: 10ನೇ ತರಗತಿ, ಐಟಿಐ ಪಾಸ್ ಕೆಲಸದ ಸ್ಥಳ: ಕೊಲ್ಕತ್ತಾ ಸಂಬಳ: ನಿಯಮಾನುಸಾರ ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್ |
ವಿದ್ಯಾರ್ಹತೆ: 10ನೇ ತರಗತಿ, ಐಟಿಐ(SSLC, ITI) ಉತ್ತೀರ್ಣರಾದ ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಡಿಸೆಂಬರ್ 14ರವರೆಗೆ ಅರ್ಜಿ ಹಾಕಬಹುದಾಗಿದೆ.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 15-24 ವರ್ಷದೊಳಗೆ ಇರಬೇಕು.
ವೇತನ: ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.
ಉದ್ಯೋಗದ ಸ್ಥಳ: ಆಯ್ಕೆಯಾದ ಅಭ್ಯರ್ಥಿಯನ್ನು ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಕೆಲಸಕ್ಕೆ ನೇಮಿಸಲಾಗುತ್ತದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕ ಪಾವತಿಸಬೇಕು.
SC/ST/PWD ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ,ದಾಖಲಾತಿ ಪರಿಶೀಲನೆ,ವೈಯಕ್ತಿಕ ಸಂದರ್ಶನ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14/12/2021
Website |
Notification |