ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟ್‌ಮ್ಯಾನ್ ಹಾಗೂ ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆ 2021

 

ಪೋಸ್ಟಲ್ ಸರ್ಕಲ್ ನಲ್ಲಿ 60 ಮಲ್ಟಿ ಟಾಸ್ಕಿಂಗ್ ಸ್ಟಾಫ್, ಪೋಸ್ಟ್‌ಮ್ಯಾನ್, ಸಾರ್ಟಿಂಗ್ ಅಸಿಸ್ಟೆಂಟ್ ಮತ್ತು ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟ ಹೊರಡಿಸಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 31,2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಪೋಸ್ಟಲ್ ಸರ್ಕಲ್ ನಲ್ಲಿ 60 ಹುದ್ದೆಗಳ ನೇಮಕಾತಿ
ಮಲ್ಟಿ ಟಾಸ್ಕಿಂಗ್ ಸ್ಟಾಫ್ – 13 ಹುದ್ದೆಗಳು
ಪೋಸ್ಟ್‌ಮ್ಯಾನ್ – 5 ಹುದ್ದೆಗಳು
ಸಾರ್ಟಿಂಗ್ ಅಸಿಸ್ಟೆಂಟ್ – 11 ಹುದ್ದೆಗಳು
ಪೋಸ್ಟಲ್ ಅಸಿಸ್ಟೆಂಟ್ – 31 ಹುದ್ದೆಗಳು
ಒಟ್ಟು 60 ಹುದ್ದೆಗಳು

ವಿದ್ಯಾರ್ಹತೆ ಮತ್ತು ಅನುಭವ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿ, 10ನೇ ತರಗತಿ, ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರಬೇಕು ಎಂದು ನೇಮಕಾತಿ ಅಧಿಸೂಚನೆ 2021ರಲ್ಲಿ ಸೂಚಿಸಲಾಗಿದೆ.

 

 

ವಯೋಮಿತಿ :
ಡಿಸೆಂಬರ್ 31,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ :
ಆಯ್ಕೆಯಾದ ಅಭ್ಯರ್ಥಿಗಳಿಗೆ 18,000/-ರಿಂದ 81,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಅರ್ಜಿ ಶುಲ್ಕ :
ಪೋಸ್ಟಲ್ ಸರ್ಕಲ್ ನೇಮಕಾತಿಯ ಮಲ್ಟಿ ಟಾಸ್ಕಿಂಗ್ ಸ್ಟಾಫ್, ಪೋಸ್ಟ್‌ಮ್ಯಾನ್, ಸಾರ್ಟಿಂಗ್ ಅಸಿಸ್ಟೆಂಟ್ ಮತ್ತು ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಡಿಸೆಂಬರ್ 21,2021ರೊಳಗೆ ಪಾವತಿಸಬೇಕಿರುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಕೆ :
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್‌ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಡಿಸೆಂಬರ್ 31,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿಯನ್ನು ತಲುಪಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಆಯ್ಕೆ ಪ್ರಕ್ರಿಯೆ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಿರುಪಟ್ಟಿ ಮಾಡಿ ನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಕಚೇರಿ ವಿಳಾಸ:
Assistant Director (Recruitment),
5th Floor, O/O the Chief Postmaster General,
Bihar Circle,
Patna – 800001.

Official Notification & Application Form
Website 
close button