ಗದಗ ಜಿಲ್ಲೆಯ ತಾಲ್ಲೂಕು ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆ: ಆಡಳಿತ ಸಹಾಯಕರು
ಉದ್ಯೋಗ ಸ್ಥಳ: ಗದಗ ಜಿಲ್ಲೆಯ ತಾಲ್ಲೂಕು ಪಂಚಾಯ್ತಿಯಲ್ಲಿ ಕೆಲಸ ನಿರ್ವಹಿಸಬೇಕು.
ಒಟ್ಟು ಹುದ್ದೆಗಳು: ಒಟ್ಟು 02 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಬಿ.ಕಾಂ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು, ಕನ್ನಡ ಮತ್ತು ಇಂಗ್ಲಿಷ್ ಕಂಪ್ಯೂಟರ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು ಜೊತೆಗೆ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯಸ್ಸಿನ ಮಿತಿ: ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ : ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಪ್ರಮುಖ ದಿನಾಂಕಗಳು
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 28, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 04, 2022
Download Notification PDF |
Application Form |