ಕರ್ನಾಟಕ ರಾಜ್ಯ ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಕಛೇರಿ ನೇಮಕಾತಿ ಅಧಿಸೂಚನೆ 2022
ಕರ್ನಾಟಕ ರಾಜ್ಯ ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಕಛೇರಿ, ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಯಾದಗಿರಿ ಜಿಲ್ಲೆ ಈ ಕಛೇರಿಗೆ ಲೆಕ್ಕಿಗರು ಕಂ ಕಛೇರಿ ಸಹಾಯಕ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ : ಲೆಕ್ಕಿಗರು-ಕಂ-ಕಛೇರಿ ಸಹಾಯಕರು
ಉದ್ಯೋಗ ಸ್ಥಳ: ಯಾದಗಿರಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ಹುದ್ದೆಗಳ ಸಂಖ್ಯೆ: 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ:
• ಬಿ.ಕಾಂ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
• ಕಂಪ್ಯೂಟರ್ ಜ್ಞಾನ ಟ್ಯಾಲಿ (ಎಂ ಎಸ್ ಆಫೀಸ್, ಎಂ ಎಸ್ ಎಕ್ಸೆಲ್ ಮತ್ತು ಇಂಟರ್ನೆಟ್ ಆಪರೇಟಿಂಗ್, ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಕಡ್ಡಾಯ)
• ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
• ಲೆಕ್ಕ ಪತ್ರ ನಿರ್ವಹಣೆ ಮತ್ತು ಬ್ಯಾಂಕ್ ವ್ಯವಹಾರದಲ್ಲಿ ಲೆಕ್ಕ ಪತ್ರಗಳಿಗೆ ಸಂಬಂಧಿಸಿದ ದಾಖಲೆ ರಿಜಿಸ್ಟರಗಳ ಕುರಿತು ಮಾಹಿತಿಯನ್ನು ಹೊಂದಿರಬೇಕು.
• ಕನ್ನಡ/ಇಂಗ್ಲಿಷ್ ಮಾತನಾಡುವ ಹಾಗೂ ಬರೆಯುವಲ್ಲಿ ಉತ್ತಮ ಶೈಲಿಯನ್ನು ಹೊಂದಿರಬೇಕು.
ವಯೋಮಿತಿ: ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಕಛೇರಿ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ : ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 14,641 ಮಾಸಿಕ ಗೌರವಧನ ನೀಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
ಅಭ್ಯರ್ಥಿಗಳು ಜಿಲ್ಲಾ ಪಂಚಾಯತ್ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಕಛೇರಿಗೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನೆ, ಯೋಜನಾ ನಿರ್ದೇಶಕರ ಕಛೇರಿ, ಕೊಠಡಿ ಸಂಖ್ಯೆ ಎ-7, ಮೊದಲನೇ ಮಹಡಿ, ಜಿಲ್ಲಾಡಳಿತ ಭವನ, ಯಾದಗಿರಿ ಜಿಲ್ಲೆ
ಅರ್ಜಿ ಶುಲ್ಕ : ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಕಛೇರಿ ನೇಮಕಾತಿ ಅಧಿಸೂಚನೆ ಪ್ರಕಾರ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ: ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಕಛೇರಿ ನೇಮಕಾತಿ ಅಧಿಸೂಚನೆ ಪ್ರಕಾರ ಕಂಪ್ಯೂಟರ್ ಜ್ಞಾನ ಪರೀಕ್ಷೆ ಮತ್ತು ನೇರ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ 08473-252345 ಸಂಪರ್ಕಿಸಬಹುದು
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 21, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 11, 2022
ನೋಟಿಫಿಕೇಶನ್ / ಅರ್ಜಿ ಸಲ್ಲಿಸುವ ಫಾರ್ಮ್