ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೇಮಕಾತಿ ಅಧಿಸೂಚನೆ 2022
BWSSB Recruitment 2022: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಅಗತ್ಯ ಇರುವ ಕಾನೂನು ಹುದ್ದೆಗೆ ಗುತ್ತಿಗೆ ಆಧಾರದ ಮೇರೆಗೆ ನೇಮಕ ಮಾಡಿಕೊಳ್ಳಲು ನೇಮಕ ಪ್ರಕಟಣೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ |
ಹುದ್ದೆಗಳ ಹೆಸರು: | ಕಾನೂನು ಅಧಿಕಾರಿ |
ಒಟ್ಟು ಹುದ್ದೆಗಳು | 01 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ |
ಉದ್ಯೋಗ ಸ್ಥಳ | ಬೆಂಗಳೂರು |
ವಿದ್ಯಾರ್ಹತೆ:
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನ್ಯಾಯಾಂಗ ಇಲಾಖೆಯಲ್ಲಿ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತಿ / ಸ್ವಯಂ ನಿವೃತ್ತಿ ಹೊಂದಿರಬೇಕು. 70 ವರ್ಷಗಳ ವಯಸ್ಸಿನ ಒಳಗಿನವರಾಗಿರಬೇಕು ಮತ್ತು ಆರೋಗ್ಯವಾಗಿ ಸದೃಢರಾಗಿರಬೇಕು
ಅರ್ಜಿ ಸಲ್ಲಿಸುವ ವಿಧಾನ: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವೈಯಕ್ತಿಕ ವಿವರ, ಸರ್ಕಾರಿ ಸೇವೆ ಸಲ್ಲಿಸಿರುವ ವಿವರ ಹಾಗೂ ಪಿಂಚಣಿ ಪುಸ್ತಕದ ನಕಲು ಪ್ರತಿಯ ವಿವರಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ : ‘ಮುಖ್ಯ ಆಡಳಿತಾಧಿಕಾರಿ ಹಾಗೂ ಕಾರ್ಯದರ್ಶಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, 1ನೇ ಮಹಡಿ, ಕಾವೇರಿ ಭವನ, ಕೆ.ಜಿ ರಸ್ತೆ, ಬೆಂಗಳೂರು’
ಇಲ್ಲಿಗೆ ಖುದ್ದಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಹುದ್ದೆಗೆ ಸಂಬಂಧಿಸಿದ ಇತರ ಮಾಹಿತಿ ಪಡೆಯಲು ಕಚೇರಿಯ ಕರ್ತವ್ಯದ ವೇಳೆ ಬೆಳಿಗ್ಗೆ 10-00 ಗಂಟೆಯಿಂದ ಸಂಜೆ 05-30 ಗಂಟೆಯೊಳಗೆ ಪಡೆಯಲು ಕೋರಲಾಗಿದೆ.
ಅರ್ಜಿ ಫಾರ್ಮ್ ಬೇಕಾದಲ್ಲಿ ಅಭ್ಯರ್ಥಿಗಳು ಖುದ್ದಾಗಿ ಕಚೇರಿಗೆ ಭೇಟಿ ನೀಡಬೇಕು