ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

KSRTC ನೇಮಕಾತಿ 2022 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ನೇಮಕಾತಿ ಪ್ರಕಟಣೆ 2022

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ನೇಮಕಾತಿ ಪ್ರಕಟಣೆ 2022

KSRTC Recruitment 2022: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕಚೇರಿ ಸಹಾಯಕ (ತೋಟಗಾರಿಕೆ) ದರ್ಜೆ IV ಪರಿಶಿಷ್ಟ ಜಾತಿ ಹಿಂಬಾಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

 

ಇಲಾಖೆ ಹೆಸರು:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
ಹುದ್ದೆಗಳ ಹೆಸರು:ಕಚೇರಿ ಸಹಾಯಕ (ತೋಟಗಾರಿಕೆ) ದರ್ಜೆ IV
ಒಟ್ಟು ಹುದ್ದೆಗಳು 01
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ 

ವಿದ್ಯಾರ್ಹತೆ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕಚೇರಿ ಸಹಾಯಕ (ತೋಟಗಾರಿಕೆ) ದರ್ಜೆ IV ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಏಳನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕಚೇರಿ ಸಹಾಯಕ (ತೋಟಗಾರಿಕೆ) ದರ್ಜೆ IV ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗೆ ಕನಿಷ್ಠ 18 ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

ದೇಹದಾರ್ಢ್ಯತೆ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ ಕಚೇರಿ ಸಹಾಯಕ (ತೋಟಗಾರಿಕೆ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಸದರಿ ಹುದ್ದೆ ನಿರ್ವಹಿಸಲು ಸಶಕ್ತರಿರುವ ಕುರಿತು ಜಿಲ್ಲಾ ವೈದ್ಯಾಧಿಕಾರಿಗಳಿಂದ ಪಡೆದ ವೈದ್ಯಕೀಯ ಪ್ರಮಾಣ ಪತ್ರ ಪಡೆಯುವುದು ಕಡ್ಡಾಯವಾಗಿದೆ.

 

 

ತರಬೇತಿ ಅವಧಿ, ಭತ್ಯೆ ಹಾಗೂ ವೇತನಶ್ರೇಣಿ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ  ಹುದ್ದೆಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳನ್ನು ಒಂದು ವರ್ಷ ಕಾಲ ವೃತ್ತಿ ತರಬೇತಿ ಮೇಲೆ ನಿಯೋಜಿಸಲಾಗುವುದು, ತರಬೇತಿ ಯಲ್ಲಿ ಮಾಸಿಕ ರೂ. 8.600/- ತರಬೇತಿ ಭತ್ಯೆ ನೀಡಲಾಗುವುದು

ಮೇಲ್ಕಾಣಿಸಿದಂತೆ ಒಂದು ವರ್ಷದ ವೃತ್ತಿ ತರಬೇತಿಯನ್ನು ತೃಪ್ತಿಕರವಾಗಿ ಪೂರೈಸಿದ್ದಲ್ಲಿ,ಅವರನ್ನು ಕಾಯಂ ಪೂರ್ವ ಪರೀಕ್ಷಾರ್ಥ ಸೇವೆಯ ಮೇಲೆ ಹುದ್ದೆಯ ಕಲಿಕಾ ವೇತನ 11.320 -15010 ನಿಯೋಜಿಸಲಾಗುತ್ತದೆ.

ಅರ್ಜಿ ಶುಲ್ಕ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 200/- ರೂ . ಡಿಡಿ ಯನ್ನು CAO-FA,KSRTC, Central Office, Bangalore ಇವರ ಹೆಸರಲ್ಲಿ ಪಡೆದು ಸಲ್ಲಿಸತಕ್ಕದು

ಆಯ್ಕೆ ವಿಧಾನ 
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆಯ ನಂತರ ಹುದ್ದೆಗೆ ನಿಗದಿ ಪಡಿಸಲಾದ 7ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಮೆರಿಟ್ ಅನುಸಾರ ಆಯ್ಕೆ ಮಾಡಲಾಗುತ್ತದೆ,

 

 

ಭರ್ತಿ ಮಾಡಿದ ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳ ವಿವರ:

  • ಅರ್ಜಿ ಶುಲ್ಕವನ್ನು ಬ್ಯಾಂಕಿನಲ್ಲಿ ಪಾವತಿಸಿರುವ ಮೂಲ ಡಿಮ್ಯಾಂಡ್ ಡ್ರಾಫ್ಟ್.
  • 7ನೇ ತರಗತಿಯಲ್ಲಿ ಉತ್ತೀರ್ಣರಾದ ಅಂಕಪಟ್ಟಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯರ ಸಹಿಯ ಜೊತೆಗೆ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೇಲು ಸಹಿಯುಳ್ಳ ಅಂಕಪಟ್ಟಿಯ ಪ್ರತಿ
  • ಜಾತಿ ಪ್ರಮಾಣ ಪತ್ರದ ಪ್ರತಿ
  • ಜನ್ಮ ದಿನಾಂಕದ ದಾಖಲೆಗಾಗಿ ಶಾಲಾ ವರ್ಗಾವಣಾ ಪತ್ರದ ಪ್ರತಿ

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 10-02-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  04-03-2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ksrtc.in
ನೋಟಿಫಿಕೇಶನ್ Click Here 
ಅರ್ಜಿ ಲಿಂಕ್ Click Here 

 

close button