ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

SSLC ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಹುದ್ದೆಗಳು : District Court Recruitment 2022

ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆ 2022

Shivamogga District Court Recruitment 2022: ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಜವಾನ (ಪಿಯೋನ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು:ಜಿಲ್ಲಾ ನ್ಯಾಯಾಲಯ
ಹುದ್ದೆಗಳ ಹೆಸರು:ಜವಾನ (ಪಿಯೋನ್)
ಒಟ್ಟು ಹುದ್ದೆಗಳು 27
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

 

ವಿದ್ಯಾರ್ಹತೆ:
ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

ವಯೋಮಿತಿ:
ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಎಸ್ಸಿ, ಎಸ್ಟಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.

 

 

ವೇತನಶ್ರೇಣಿ:
ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ನೇಮಕಾತಿ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 ರಿಂದ ರೂ. 28,950 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಆಯ್ಕೆ ವಿಧಾನ 
ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 10 ಅಭ್ಯರ್ಥಿಗಳಂತೆ (1:10 ರ ಅನುಪಾತದಲ್ಲಿ) ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಫೆಬ್ರುವರಿ 25, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಮಾರ್ಚ್ 24, 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ Click Here 
ನೋಟಿಫಿಕೇಶನ್ Click Here 
ಅರ್ಜಿ ಲಿಂಕ್ Click Here 

 

close button