ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ನೇಮಕಾತಿ 2022
Vijayapura DCC Bank Recruitment 2022 : ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 71 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ |
ಹುದ್ದೆಗಳು: ಹಿರಿಯ ವ್ಯವಸ್ಥಾಪಕರು, ಕಿರಿಯ ವ್ಯವಸ್ಥಾಪಕರು, ಕಂಪ್ಯೂಟರ್ ಇಂಜಿನಿಯರ್, ಕ್ಷೇತ್ರಾಧಿಕಾರಿಗಳು, ಕೃಷಿ ಅಭಿವೃದ್ಧಿ ಅಧಿಕಾರಿ, ಪ್ರಥಮ ದರ್ಜೆ ಸಹಾಯಕರು, ಜವಾನ, ಸೆಕ್ಯೂರಿಟಿ ಗಾರ್ಡ್
ಹುದ್ದೆಗಳು ಹುದ್ದೆಗಳ ಸಂಖ್ಯೆ ಮತ್ತು ವೇತನಶ್ರೇಣಿ
ಹಿರಿಯ ವ್ಯವಸ್ಥಾಪಕರು 3 ಹುದ್ದೆಗಳು ಕಿರಿಯ ವ್ಯವಸ್ಥಾಪಕರು 5 ಹುದ್ದೆಗಳು ಕಂಪ್ಯೂಟರ್ ಇಂಜಿನಿಯರ್ 1 ಹುದ್ದೆಗಳು ಕ್ಷೇತ್ರಾಧಿಕಾರಿಗಳು 15 ಹುದ್ದೆಗಳು ಕೃಷಿ ಅಭಿವೃದ್ಧಿ ಅಧಿಕಾರಿ 1 ಹುದ್ದೆಗಳು
ಪ್ರಥಮ ದರ್ಜೆ ಸಹಾಯಕ 21 ಹುದ್ದೆಗಳು ಜವಾನ 23 ಹುದ್ದೆಗಳು ಸೆಕ್ಯೂರಿಟಿ ಗಾರ್ಡ್ 2 ಹುದ್ದೆಗಳು |
ಉದ್ಯೋಗ ಸುದ್ದಿ: ನೋಂದಣಿ ಮತ್ತು ಮುದ್ರಂಕ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
ಶೈಕ್ಷಣಿಕ ವಿದ್ಯಾರ್ಹತೆ: • ಹಿರಿಯ ವ್ಯವಸ್ಥಾಪಕರು ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಪದವಿ, ಕಂಪ್ಯೂಟರ್ ಪರಿಜ್ಞಾನ ಹಾಗೂ ಕನಿಷ್ಠ 3 ವರ್ಷ ಬ್ಯಾಂಕಿನಲ್ಲಿ ವ್ಯವಸ್ಥಾಪಕ ದರ್ಜೆಯಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು. • ಕಿರಿಯ ವ್ಯವಸ್ಥಾಪಕರು ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಪದವಿ, ಕಂಪ್ಯೂಟರ್ ಪರಿಜ್ಞಾನ ಹಾಗೂ ಕನಿಷ್ಠ 3 ವರ್ಷ ಬ್ಯಾಂಕಿನಲ್ಲಿ ಕ್ಷೇತ್ರಾಧಿಕಾರಿ ದರ್ಜೆಯಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು. • ಕಂಪ್ಯೂಟರ್ ಇಂಜಿನಿಯರ್ ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಬಿ.ಇ (ಕಂಪ್ಯೂಟರ್ ಸೈನ್ಸ್/ಇ ಮತ್ತು ಸಿ)/ಎಂ.ಸಿ.ಎ ಪದವಿ ಪಡೆದಿರಬೇಕು. • ಕ್ಷೇತ್ರಾಧಿಕಾರಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಪದವಿ, ಕಂಪ್ಯೂಟರ್ ಪರಿಜ್ಞಾನ ಹಾಗೂ ಕನಿಷ್ಠ 2 ವರ್ಷ ಬ್ಯಾಂಕಿನಲ್ಲಿ ಗುಮಾಸ್ತರ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು. • ಕೃಷಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಬಿ.ಎಸ್ಸಿ (ಅಗ್ರಿ) ಪದವಿ ಪಡೆದಿರಬೇಕು. • ಪ್ರಥಮ ದರ್ಜೆ ಸಹಾಯಕರು ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಾಸಾಗಿರಬೇಕು. ಕಂಪ್ಯೂಟರ್ ತರಬೇತಿ, ಸಹಕಾರ ಕ್ಷೇತ್ರದಲ್ಲಿ ಅನುಭವ ಹೊಂದಿರುವವರಿಗೆ ಅರ್ಹತೆ ಮೇಲೆ ಆದ್ಯತೆ ನೀಡಲಾಗುವುದು. • ಜವಾನ ಮತ್ತು ಸೆಕ್ಯೂರಿಟಿ ಗಾರ್ಡ್ ಹುದ್ದೆಗೆ ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು. |
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ,
ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ,
ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು ರೂ. 500 ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ಮಾಜಿ ಸೈನಿಕ ಅಭ್ಯರ್ಥಿಗಳು ರೂ. 250 ಪಾವತಿಸಬೇಕು
ಆಯ್ಕೆ ವಿಧಾನ
ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ 1:20ರ ಅನುಪಾತದಲ್ಲಿ ಲಿಖಿತ ಪರೀಕ್ಷೆಗೆ ಕರೆಯಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಶೇ 85ಕ್ಕೆ ಇಳಿಸಿ 1:5ರ ಅನುಪಾತದಲ್ಲಿ ಮೌಖಿಕ ಸಂದರ್ಶನಕ್ಕೆ ಕರೆಯಲಾಗುವುದು. ಇದರೊಂದಿಗೆ ಕಂಪ್ಯೂಟರ್ ಇಂಜಿನಿಯರ ಹಾಗೂ ಕೃಷಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗೆ ಪ್ರಾವಿಣ್ಯತೆ ಪರೀಕ್ಷೆ ನಡೆಸಲಾಗುವುದು. (ಜವಾನ/ಸೆಕ್ಯೂರಿಟಿ ಗಾರ್ಡ್ ಹುದ್ದೆಗಳಿಗೆ ಅಭ್ಯರ್ಥಿಗಳು ನಿಗದಿಪಡಿಸಿದ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ 1:5ರ ಅನುಪಾತದಲ್ಲಿ ಮೌಖಿಕ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು)
ಅರ್ಜಿ ಸಲ್ಲಿಸುವ ವಿಳಾಸ : ಸಂಚಾಲಕ ಸದಸ್ಯರು, ನೇಮಕಾತಿ ಸಮಿತಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು,
ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಸೋಲಾಪುರ ರಸ್ತೆ, ವಿಜಯಪುರ
ಪ್ರಮುಖ ದಿನಾಂಕಗಳು |
ಬ್ಯಾಂಕಿನಿಂದ ಅರ್ಜಿ ಪಡೆಯಲು ಪ್ರಾರಂಭದ ದಿನಾಂಕ | ಫೆಬ್ರುವರಿ 15, 2022 |
ಬ್ಯಾಂಕಿನಿಂದ ಅರ್ಜಿ ಪಡೆಯಲು ಕೊನೆಯ ದಿನಾಂಕ | ಮಾರ್ಚ್ 02, 2022 |
ಬ್ಯಾಂಕಿನಿಂದ ಅರ್ಜಿ ಪಡೆಯಲು ಕೊನೆಯ ದಿನಾಂಕ | ಮಾರ್ಚ್ 05, 2022 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | Click Here |