ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಬೆಂಗಳೂರು ಸಾರಿಗೆ ಇಲಾಖೆಯಲ್ಲಿ 300 ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ 2022

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೇಮಕಾತಿ 2022

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 300 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು:ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು 300
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 

 

ವಿದ್ಯಾರ್ಹತೆ:
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ ಅಥವಾ ಐಟಿಐ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ವಯೋಮಿತಿ:
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಮಾರ್ಚ್ 30,2022ರ ಅನ್ವಯ ಕನಿಷ್ಟ 16 ರಿಂದ ಗರಿಷ್ಟ 26 ವರ್ಷ ವಯೋಮಿತಿಯೊಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

 

 

ವೇತನಶ್ರೇಣಿ:
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಎಸ್‌ಎಸ್‌ಎಲ್‌ಸಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ 6,000/-ರೂ ಮತ್ತು ಐಟಿಐ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ 7,000/-ರೂ ತರಬೇತಿ ಭತ್ಯೆಯನ್ನು ನೀಡಲಾಗುವುದು.

ಅರ್ಜಿ ಶುಲ್ಕ:
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಆಯ್ಕೆ ವಿಧಾನ 
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.apprenticeshipindia.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ನಂತರ ಅರ್ಜಿಯ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮಾರ್ಚ್ 30,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ:
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ತರಬೇತಿ ಕೇಂದ್ರ, 2ನೇ ಮಹಡಿ, ಶಾಂತಿನಗರ ಬಸ್ ನಿಲ್ದಾಣ, ಬೆಂಗಳೂರು – 560027.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಫೆಬ್ರವರಿ 25,2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 30,2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

 

close button