ಭಾರತೀಯ ರಿಸರ್ವ್ ಬ್ಯಾಂಕ್ ಅಸಿಸ್ಟಂಟ್ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ
ಭಾರತೀಯ ರಿಸರ್ವ್ ಬ್ಯಾಂಕ್ ಅಸಿಸ್ಟಂಟ್ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಈ ನೋಟಿಫಿಕೇಶನ್ ಪ್ರಕಾರ 950 ಅಸಿಸ್ಟಂಟ್ ಪೋಸ್ಟ್ಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ಭಾರತೀಯ ರಿಸರ್ವ್ ಬ್ಯಾಂಕ್ |
ಹುದ್ದೆಗಳ ಹೆಸರು: | ಅಸಿಸ್ಟಂಟ್ |
ಒಟ್ಟು ಹುದ್ದೆಗಳು | 950 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಅಭ್ಯರ್ಥಿಗಳು ಕನಿಷ್ಠ ಶೇ.50 ಅಂಕಗಳೊಂದಿಗೆ ಯಾವುದೇ ಪದವಿಯಲ್ಲಿ ತೇರ್ಗಡೆ ಆಗಿರಬೇಕು. (ಎಸ್ಸಿ, ಎಸ್ಟಿ, ವಿಕಲಚೇತನ ಅಭ್ಯರ್ಥಿಗಳು ಜಸ್ಟ್ ಪಾಸ್ ಅಂಕಗಳನ್ನು ಪಡೆದಿದ್ದರೂ ಅರ್ಜಿ ಸಲ್ಲಿಸಬಹುದು). ಅಭ್ಯರ್ಥಿಗಳು ಯಾವ ಪ್ರಾದೇಶಿಕ ಕೇಂದ್ರದಲ್ಲಿ ನೇಮಕಾತಿ ಬಯಸುತ್ತಾರೋ, ಅಲ್ಲಿನ ಪ್ರಾದೇಶಿಕ ಭಾಷೆಯನ್ನು ಓದಲು, ಬರೆಯಲು, ಅರ್ಥಮಾಡಿಕೊಳ್ಳಲು, ಮಾತನಾಡಲು ಗೊತ್ತಿರಬೇಕು.
ವಯೋಮಿತಿ:
ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ, ಗರಿಷ್ಠ 28 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಎಸ್ಸಿ / ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳು ಬೇಸಿಕ್ ಸ್ಯಾಲರಿ ರೂ.14,650 ಜೊತೆಗೆ ಇತರೆ ಭತ್ಯೆಗಳು ಸೇರಿದಂತೆ ರೂ.34990 ವರೆಗೆ ಮಾಸಿಕವಾಗಿ ಪಡೆಯಲಿದ್ದಾರೆ.
ಅರ್ಜಿ ಶುಲ್ಕ:
ಭಾರತೀಯ ರಿಸೆರ್ವೆ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ
ಆಯ್ಕೆ ವಿಧಾನ
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಎರಡು ಹಂತದ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಮೊದಲ ಹಂತದ ಪರೀಕ್ಷೆಯನ್ನು 100 ಅಂಕಗಳಿಗೆ, ಎರಡನೇ ಹಂತದ ಪರೀಕ್ಷೆಯನ್ನು 200 ಅಂಕಗಳಿಗೆ ಈ ಮೇಲೆ ತಿಳಿಸಿದ ಮಾದರಿಯಲ್ಲಿ ನಡೆಸಲಾಗುತ್ತದೆ.
ಮುಖ್ಯ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಪ್ರಾದೇಶಿಕ ಭಾಷಾ ಪರೀಕ್ಷೆಗೆ ಕರೆಯಲಾಗುತ್ತದೆ.
ಪರೀಕ್ಷಾ ಕೇಂದ್ರಗಳು
ಪಶ್ಚಿಮ ವಲಯ, ಉತ್ತರ ವಲಯ, ಪೂರ್ವ ವಲಯ ಮತ್ತು ದಕ್ಷಿಣ ವಲಯ ಎಂಬುದಾಗಿ ನಾಲ್ಕು ವಲಯಗಳಲ್ಲಿ ಪರೀಕ್ಷೆ ನಡೆಯಲಿದೆ. ಕರ್ನಾಟಕ ಅಭ್ಯರ್ಥಿಗಳು ದಕ್ಷಿಣ ವಲಯದ ಬೆಂಗಳೂರು ಕೇಂದ್ರದಲ್ಲಿ ಪರೀಕ್ಷೆ ಬರೆಯಬಹುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 17-02-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 08-03-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | Click Here |
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ | Click Here |