ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

10ನೇ ಆದವರಿಗೆ ಇಲ್ಲಿವೆ ಸರ್ಕಾರಿ ಹುದ್ದೆಗಳು: District Court Recruitment 2022

ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ 2022

Chamarajanagar District Court Recruitment 2022 : ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು, ಸೇವಕರು ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು:ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಘಟಕ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 26
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

 

ಹುದ್ದೆಗಳ ವಿವರ
ಶೀಘ್ರಲಿಪಿಗಾರರು: 3
ಬೆರಳಚ್ಚುಗಾರರು: 2
ಬೆರಳಚ್ಚು ನಕಲುಗಾರರು: 3
ಆದೇಶ ಜಾರಿಕಾರರು: 6
ಸೇವಕರು: 12

ವಿದ್ಯಾರ್ಹತೆ:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10ನೇ ತರಗತಿ ಪಾಸ್‌ ಮಾಡಿರಬೇಕು. ಜೊತೆಗೆ ನಿಗದಿಪಡಿಸಿದ ಇತರೆ ಅಗತ್ಯ ಅರ್ಹತೆಗಳನ್ನು ಹೊಂದಿರಬೇಕು.
* ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಬೆರಳಚ್ಚು ಪರೀಕ್ಷೆ, ಜೂನಿಯರ್ ಮತ್ತು ಸೀನಿಯರ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
*ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರಿಣತಿ ಅಪೇಕ್ಷಣೀಯ. ಆದೇಶ ಜಾರಿಕಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಯು ಲಘು ಮತ್ತು ಭಾರೀ ವಾಹನ ಚಾಲನಾ ಪರವಾನಗಿ ಹೊಂದಿರುವುದು ಕಡ್ಡಾಯ.
*ಅಭ್ಯರ್ಥಿಗಳಿಗೆ ಸ್ಥಳೀಯ ಭಾಷೆ ಕನ್ನಡದಲ್ಲಿ ಓದಲು, ಬರೆಯಲು ಮತ್ತು ವ್ಯವಹರಿಸುವ ಜ್ಞಾನ ಇರಬೇಕು.
* ಸೇವಕರು ಹುದ್ದೆಗೆ ಎಸ್‌ಎಸ್‌ಎಲ್‌ಸಿ ಪಾಸ್‌ ಆಗಿರಬೇಕು. ಹಾಗೂ ಕನ್ನಡ ಓದಲು, ಬರೆಯಲು ಗೊತ್ತಿರಬೇಕು.

 

 

ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯೋಮಿತಿ ಈ ಕೆಳಗಿನಂತಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷಗಳು
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷಗಳು ಗರಿಷ್ಠ ವಯೋಮಿತಿ.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಗರಿಷ್ಠ ವಯೋಮಿತಿ.

ವೇತನಶ್ರೇಣಿ:
ಶೀಘ್ರಲಿಪಿಗಾರರು: ರೂ.27650-52650. ವೇತನ ಶ್ರೇಣಿ ನಿಗದಿ ಮಾಡಲಾಗಿದೆ.
ಬೆರಳಚ್ಚುಗಾರರು: ರೂ.21400-42000. ವೇತನ ಶ್ರೇಣಿ ನಿಗದಿ ಮಾಡಲಾಗಿದೆ.
ಬೆರಳಚ್ಚು ನಕಲುಗಾರರು: ರೂ.21400-42000. ವೇತನ ಶ್ರೇಣಿ ನಿಗದಿ ಮಾಡಲಾಗಿದೆ.
ಆದೇಶ ಜಾರಿಕಾರರು: ರೂ.19950-37900. ವೇತನ ಶ್ರೇಣಿ ನಿಗದಿ ಮಾಡಲಾಗಿದೆ.
ಸೇವಕರು: ರೂ.17000-28950. ವೇತನ ಶ್ರೇಣಿ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.200.
ಎಸ್‌ಸಿ / ಎಸ್‌ಟಿ / ಪ್ರವರ್ಗ-1, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಶುಲ್ಕವನ್ನು ಎಸ್‌ಬಿಐ ಬ್ಯಾಂಕ್‌ಗಳ ಯಾವುದೇ ಶಾಖೆಗಳಲ್ಲಿ ಪಾವತಿಸಬಹುದು. ಅಥವಾ ಆನ್‌ಲೈನ್‌ ಪೇಮೆಂಟ್‌ ಸಹ ಮಾಡಬಹುದು.

 

 

ಆಯ್ಕೆ ವಿಧಾನ 
ಶೀಘ್ರ ಲಿಪಿಗಾರರು ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಉಕ್ತಲೇಖನವನ್ನು ಕೊಟ್ಟು ಕಂಪ್ಯೂಟರ್‌ನಲ್ಲಿ ಬೆರಳಚ್ಚು ಮಾಡಿಸಿ ಅರ್ಹತಾ ಪರೀಕ್ಷೆ ನಡೆಸಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 10-03-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11-04-2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

 

 

close button