ಮಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ 183 ಹುದ್ದೆಗಳಿಗೆ ಆಹ್ವಾನಿಸಲಾಗಿದೆ.
MESCOM Recruitment 2022: ಮಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ 183 ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ಮಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ |
ಒಟ್ಟು ಹುದ್ದೆಗಳು | 183 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ
ಗ್ರಾಜುಯೇಟ್ ಅಪ್ರೆಂಟಿಸ್ | 112 |
ಡಿಪ್ಲೋಮಾ ಅಪ್ರೆಂಟಿಸ್ | 71 |
ಒಟ್ಟು ಹುದ್ದೆಗಳು | 183 |
ವಿದ್ಯಾರ್ಹತೆ:
ಮಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಇಂಜಿನಿಯರಿಂಗ್ ನಲ್ಲಿ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ವಯೋಮಿತಿ:
ಮಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು. ಮತ್ತು ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನಶ್ರೇಣಿ:
ಮಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ ನೇಮಕಾತಿ ಅಧಿಸೂಚನೆಯ ಪ್ರಕಾರ
ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಮಾಸಿಕ 9,000/-ರೂ ಮತ್ತು
ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 8,000/-ರೂ ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಮಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 25-05-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 15-06-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |