ಜವಾನ (ಪಿಯೋನ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
Ballari District Court Recruitment 2022: ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಜವಾನ (ಪಿಯೋನ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ಬಳ್ಳಾರಿ ಜಿಲ್ಲಾ ನ್ಯಾಯಾಲಯ |
ಹುದ್ದೆಗಳ ಹೆಸರು: | ಜವಾನ (ಪಿಯೋನ್) |
ಒಟ್ಟು ಹುದ್ದೆಗಳು | 33 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
• ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು
ವಯೋಮಿತಿ:
ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು
ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ,
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ,
ಎಸ್ಸಿ, ಎಸ್ಟಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.
ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 ರಿಂದ ರೂ. 28,950 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 200 ಶುಲ್ಕ ಪಾವತಿಸಬೇಕು. ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಬಳ್ಳಾರಿ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ಆಯ್ಕೆ ವಿಧಾನ
ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಡೆದ ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 10 ಅಭ್ಯರ್ಥಿಗಳಂತೆ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನ ದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಏಪ್ರಿಲ್ 27, 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಮೇ 29, 2022 |
ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ | ಮೇ 31, 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |