ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

SSLC ಪಾಸಾದವರಿಗೆ ಗ್ರಾಮ ಪಂಚಾಯಿತಿ ಖಾಲಿ ಹುದ್ದೆಗಳು । Gram Panchayat Recruitment 2022

ವಿಜಯಪುರ ಜಿಲ್ಲೆಯ ಗ್ರಾಮ ಪಂಚಾಯತ ನೇಮಕಾತಿ ಅಧಿಸೂಚನೆ 2022

Vijayapura Gram Panchayat Recruitment 2022: ವಿಜಯಪುರ ಜಿಲ್ಲೆಯ ಗ್ರಾಮ ಪಂಚಾಯತ ಗ್ರಂಥಾಲಯಗಳಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

 

ಇಲಾಖೆ ಹೆಸರು:ವಿಜಯಪುರ ಜಿಲ್ಲೆಯ ಗ್ರಾಮ ಪಂಚಾಯತ
ಹುದ್ದೆಗಳ ಹೆಸರು:ಗ್ರಂಥಾಲಯ ಮೇಲ್ವಿಚಾರಕರು
ಒಟ್ಟು ಹುದ್ದೆಗಳು 01
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

 

ವಿದ್ಯಾರ್ಹತೆ:
ವಿಜಯಪುರ ಜಿಲ್ಲೆಯ ಗ್ರಾಮ ಪಂಚಾಯತ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

– ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು.
– ನಿಗದಿಪಡಿಸಿದ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸತಕ್ಕದ್ದು
– ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದಿದ್ದವರಿಗೆ ಆದ್ಯತೆ ನೀಡಲಾಗುವುದು.

 

 

ಉದ್ಯೋಗ ಸ್ಥಳ :
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಾಂದಕವಟೆ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಕೆಲಸ ನಿರ್ವಹಿಸಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು 18 ವರ್ಷ ವಯಸ್ಸನ್ನು ಪೂರೈಸಿರಬೇಕು ಹಾಗೂ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 36 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

ಅರ್ಜಿ ಶುಲ್ಕ :
ವಿಜಯಪುರ ಜಿಲ್ಲೆಯ ಗ್ರಾಮ ಪಂಚಾಯತ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸುವ ವಿಧಾನ:
– ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
– ಅಭ್ಯರ್ಥಿಗಳು ವಿಜಯಪುರ ಜಿಲ್ಲಾ ಪಂಚಾಯತ್ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಏಪ್ರಿಲ್ 18, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 07, 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
close button