ವಿಲೇಜ್ ಅಕೌಂಟೆಂಟ್ ನೇಮಕಾತಿ ಅಧಿಸೂಚನೆ 2022
uttara kannada Village Accountant Recruitment 2022: ಉತ್ತರ ಕನ್ನಡ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ಕಂದಾಯ ಇಲಾಖೆ |
ಹುದ್ದೆಗಳ ಹೆಸರು: | ಗ್ರಾಮ ಲೆಕ್ಕಾಧಿಕಾರಿ |
ಒಟ್ಟು ಹುದ್ದೆಗಳು | 102 ಹುದ್ದೆಗಳ ಭರ್ತಿ |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ದ್ವಿತೀಯ ಪಿ.ಯು.ಸಿ. ಪರೀಕ್ಷೆ ಅಥವಾ ಸೆಂಟ್ರಲ್ ಬೋರ್ಡ್ ಆಪ್ ಸೆಕೆಂಡರಿ ಎಜುಕೇಷನ್ (ಸಿ ಬಿ ಎಸ್ ಸಿ ) ಅಥವಾ ಐ.ಸಿ.ಎಸ್.ಇ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಈ ವಿದ್ಯಾರ್ಹತೆಯನ್ನು ಅಧಿಸೂಚನೆ ಹೊರಡಿಸಿರುವ ದಿನಾಂಕಕ್ಕೆ ಮುಂಚಿತವಾಗಿ ಹೊಂದಿರತಕ್ಕದ್ದು. ಈ ವಿದ್ಯಾರ್ಹತೆ ಹೊರತುಪಡಿಸಿ ಇನ್ನಿತರ ಯಾವುದೇ ತತ್ಸಮಾನ ವಿದ್ಯಾರ್ಹತೆಗಳನ್ನು ಪರಿಗಣಿಸಲಾಗುವುದಿಲ್ಲ.
ವಯೋಮಿತಿ:
ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ವೇತನಶ್ರೇಣಿ:
ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
• ಪ.ಜಾತಿ/ಪ.ಪಂ/ಪ್ರ1/ಅಂಗವಿಕಲ ಅಭ್ಯರ್ಥಿಗಳು ರೂ. 100
• ಇತರೆ ಅಭ್ಯರ್ಥಿಗಳು ರೂ. 200
(ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಇಲಾಖೆಯ ವೆಬ್ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.)
ಆಯ್ಕೆ ವಿಧಾನ
ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ದ್ವಿತೀಯ ಪಿ.ಯು.ಸಿ. ಪರೀಕ್ಷೆ ಅಥವಾ ಸಿ ಬಿ ಎಸ್ ಸಿ ಅಥವಾ ಐ.ಸಿ.ಎಸ್.ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಏಪ್ರಿಲ್ 10, 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಮೇ 10, 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |