ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ನೇಮಕಾತಿ ಅಧಿಸೂಚನೆ 2022 । HESCOM Karnataka Recruitment 2022

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ನೇಮಕಾತಿ ಅಧಿಸೂಚನೆ 2022

HESCOM Karnataka Recruitment 2022 : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತವು 2022-23ನೇ ಸಾಲಿಗೆ 238 ಶಿಶುಕ್ಷುಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ
ಹುದ್ದೆಗಳ ಹೆಸರು:ಅಪ್ರೆಂಟಿಸ್ / ಶಿಶುಕ್ಷು
ಒಟ್ಟು ಹುದ್ದೆಗಳು 238
ಅರ್ಜಿ ಸಲ್ಲಿಸುವ ಬಗೆ ಆಫ್ ಲೈನ್ 

 

ಬೇಕಾಗಿರುವ ಅರ್ಹತೆಗಳು 

  • ಎನ್‌ಸಿವಿಟಿ / ಎಸ್‌ಸಿವಿಟಿ ಶೈಕ್ಷಣಿಕ ಸಂಸ್ಥೆಗಳಿಂದ ಎರಡು ವರ್ಷದ ಐಟಿಐ ಇಲೆಕ್ಟ್ರೀಷಿಯನ್ ಪಾಸ್‌ ಮಾಡಿರಬೇಕು. ಈ ಅಭ್ಯರ್ಥಿಗಳಿಗೆ ಒಂದು ವರ್ಷದ ಶಿಶುಕ್ಷು ತರಬೇತಿ ನೀಡಲಾಗುತ್ತದೆ.
  • ಅಭ್ಯರ್ಥಿ ವಯಸ್ಸು 20-04-2022 ಕ್ಕೆ 25 ವರ್ಷಕ್ಕಿಂತ ಮೀರಿರಬಾರದು. ಪರಿಶಿಷ್ಟ ಜಾತಿ / ಪಂಗಡದ ಅಭ್ಯರ್ಥಿಗಳ ವಯಸ್ಸು 20-04-2022 ಕ್ಕೆ 30 ವರ್ಷಕ್ಕಿಂತ ಮೀರಿರಬಾರದು.
  • ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಒಂದು ವಿಷಯವಾಗಿ ತೆಗೆದುಕೊಂಡಿದ್ದು ಮತ್ತು ಕನ್ನಡದಲ್ಲಿ ಓದಲು ಹಾಗೂ ಬರೆಯಲು ತಿಳಿದಿರಬೇಕು.
  • ಇಲೆಕ್ಟ್ರೀಷಿಯನ್ ವೃತ್ತಿಯಲ್ಲಿ ವ್ಯಾಸಂಗ ಮಾಡಿ ಉತ್ತೀರ್ಣರಾಗಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಭರ್ತಿ ಮಾಡಿದ ಅರ್ಜಿ ಸಲ್ಲಿಸಬೇಕಾದ ವಿಳಾಸ :
ಕಾರ್ಯನಿರ್ವಾಹಕ ಇಂಜಿನಿಯರರು, ಕೈಗಾರಿಕಾ ತರಬೇತಿ ಕೇಂದ್ರ (ಐಟಿಸಿ), ಹೆಸ್ಕಾಂ, ವಿದ್ಯುತ್ ನಗರ, ಕಾರವಾರ ರಸ್ತೆ, ಹುಬ್ಬಳ್ಳಿ-24.

-ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 20-05-2022 ರ ಸಂಜೆ 04 ಗಂಟೆಯೊಳಗೆ.
-ಅರ್ಜಿಯನ್ನು ನಿಗದಿತ ದಿನಾಂಕದೊಳಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಕಳುಹಿಸಬಹುದಾಗಿದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-05-2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

 

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉಕ್ಕಲಿ ಅವರು ಉದ್ಯೋಗ ಬಿಂದುವಿನಲ್ಲಿ ವಿಷಯ ಬರಹಗಾರರಾಗಿದ್ದು, ಕರ್ನಾಟಕದಲ್ಲಿ ಸರ್ಕಾರಿ ಮತ್ತು ಖಾಸಗಿ ಉದ್ಯೋಗಗಳ ಕುರಿತು ವಿಶ್ವಾಸಾರ್ಹ ನವೀಕರಣಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ನೇಮಕಾತಿ ಅಧಿಸೂಚನೆ 2022 । HESCOM Karnataka Recruitment 2022

close button