ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

10ನೇ ಪಾಸಾದವರಿಗೆ ಡೇಟಾ ಎಂಟ್ರಿ ಆಪರೇಟರ್ ಹಾಗೂ ವಿವಿಧ ಹುದ್ದೆಗಳ ಭರ್ತಿ 2022

ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿ

Bangalore Rural Zilla Panchayat Recruitment 2022: ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 50
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಕರವಸೂಲಿಗಾರರು 4
ಡಾಟಾ ಎಂಟ್ರಿ ಆಪರೇಟರ್ 4
ಅಟೆಂಡೆಂಟ್ (ಜವಾನ) 8
ಕ್ಲೀನರ್ (ಸ್ವಚ್ಛತಾಗಾರ) 34
ಒಟ್ಟು 50 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 

ವಿದ್ಯಾರ್ಹತೆ:

ಕರವಸೂಲಿಗಾರರು – ಕನ್ನಡವನ್ನು ಒಂದು ವಿಷಯವನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.

ಡಾಟಾ ಎಂಟ್ರಿ ಆಪರೇಟರ್ – ಕನ್ನಡವನ್ನು ಒಂದು ವಿಷಯವನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಆರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.

ಅಟೆಂಡೆಂಟ್ ಹಾಗೂ ಕ್ಲೀನರ್ – ಕನ್ನಡವನ್ನು ಒಂದು ವಿಷಯವನ್ನಾಗಿ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ಹಿಂ. ವರ್ಗ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
ಪ.ಜಾತಿ/ಪ.ಪಂ/ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನಶ್ರೇಣಿ:
ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿ ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾರ್ಮಿಕ ಇಲಾಖೆಯಿಂದ ನಿಗದಿಪಡಿಸುವ ಕನಿಷ್ಠ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 300
ಹಿಂದುಳಿದ ವರ್ಗದ ಅಭ್ಯರ್ಥಿಗಳು ರೂ. 200
ಪ‌.ಜಾತಿ, ಪ.ಪಂ. ಅಭ್ಯರ್ಥಿಗಳು ರೂ. 100
ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ನಿಗಧಿತ ಶುಲ್ಕ ಪಾವತಿಸಬೇಕು.

ಆಯ್ಕೆ ವಿಧಾನ 
ಕರವಸೂಲಿಗಾರರು, ಅಟೆಂಡೆಂಟ್, ಕ್ಲೀನರ್ ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಹಾಗೂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು ಹಾಗೂ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಮೇ 21, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 06, 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
close button