ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಬಿಬಿಎಂಪಿ ನೇಮಕಾತಿ ಅಧಿಸೂಚನೆ 2022 । BBMP Recruitment 2022

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿ ಅಧಿಸೂಚನೆ 2022

BBMP Recruitment 2022: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಕಾನೂನು ಕೋಶದ ಮುಖ್ಯಸ್ಥರ ಹುದ್ದೆ ಭರ್ತಿಗಾಗಿ ನೇಮಕ ಪ್ರಕಟಣೆ ಬಿಡುಗಡೆ ಮಾಡಿದೆ. ಹೆಡ್‌ ಆಪ್‌ ದಿ ಲೀಗಲ್ ಹುದ್ದೆಯನ್ನು ಭರ್ತಿ ಮಾಡಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ
ಹುದ್ದೆಗಳ ಹೆಸರು:ಕಾನೂನು ಕೋಶದ ಮುಖ್ಯಸ್ಥರ
ಒಟ್ಟು ಹುದ್ದೆಗಳು  
ಅರ್ಜಿ ಸಲ್ಲಿಸುವ ಬಗೆ ಆಫ್ ಲೈನ್ 

 

  • ಅರ್ಹತೆಗಳು
    ಸೇವಾ ವಿಷಯಗಳಲ್ಲಿ, ಕಾರ್ಮಿಕರ ಕಾನೂನು, ಭೂ ಕಾನೂನು ಇತ್ಯಾದಿ ವಿಷಯಗಳಲ್ಲಿ ಉತ್ತಮ ಪರಿಣಿತಿ ಹೊಂದಿರುವ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾಗಿ ಕೆಲಸ ನಿರ್ವಹಿಸಿರಬೇಕು. ಅಥವಾ
  • ಸಹಾಯಕ ಡ್ರಾಫ್ಟ್‌ಮನ್ ಹುದ್ದೆಗಿಂತ ಕಡಿಮೆ ಇಲ್ಲದ ಮತ್ತು ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಯಾಗಿ ಸಂಸದೀಯ ವ್ಯವಹಾರಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿ ಆಗಿರಬೇಕು. ಅಥವಾ
  •  ಕರ್ನಾಟಕದಲ್ಲಿ ಕನಿಷ್ಠ 10 ವರ್ಷಗಳ ವಕೀಲ ವೃತ್ತಿಯ ಅನುಭವ ಹೊಂದಿರುವ ವಕೀಲರು ಆಗಿರಬೇಕು.
  •  ಅರ್ಜಿ ಸಲ್ಲಿಸಬಯಸುವವರು 67 ವರ್ಷ ವಯಸ್ಸು ಮೀರಿರಬಾರದು.

  • ಮುಖ್ಯ ಅಂಶಗಳು
  •  ಹುದ್ದೆಯ ಅವಧಿ ಪ್ರಾರಂಭದಲ್ಲಿ 01 ವರ್ಷದವರೆಗಿರುತ್ತದೆ. ಕಾರ್ಯಕ್ಷಮತೆಯನ್ನು ಆಧರಿಸಿ 01 ರಿಂದ 03 ವರ್ಷಗಳವರೆಗೆ ವೃತ್ತಿಯಲ್ಲಿ ಮುಂದುವರೆಸಲಾಗುವುದು.
  •  ಕೆಸಿಎಸ್‌ಆರ್‌ ಗಳ ನಿಯಮಗಳ ಪ್ರಕಾರ ಅಭ್ಯರ್ಥಿಗಳಿಗೆ ವೇತನ ನಿಗಧಿಪಡಿಸಲಾಗುವುದು.
  • ಬಿಬಿಎಂಪಿ ಉದ್ಯೋಗಿಗಳಿಗಿರುವಂತೆ ರಜೆ ಮತ್ತು ವೈದ್ಯಕೀಯ ಸೌಲಭ್ಯಗಳು ಇರುತ್ತವೆ.
  •  ಅಭ್ಯರ್ಥಿಗಳಿಗೆ ಸಂದರ್ಶನದ ಮೂಲಕ ನೇಮಕ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಸಂಪೂರ್ಣ ಬಯೋಡಾಟಾ ಜತೆಗೆ, ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಅರ್ಜಿಗಳನ್ನು ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ
ಮಾನ್ಯ ಮುಖ್ಯ ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಎನ್‌.ಆರ್.ಚೌಕ, ಬೆಂಗಳೂರು-560002.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 26-05-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-06-2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

 

close button