ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

12ನೇ ಪಾಸಾದವರಿಗೆ ಖಾಲಿ ಹುದ್ದೆಗಳ ಭರ್ತಿ 2022 | ITBP Recruitment 2022

ಇಂಡೋ ಟಿಬಿಟನ್ ಬಾರ್ಡರ್ ಪೊಲೀಸ್ ಇಲಾಖೆ ನೇಮಕಾತಿ 2022

ITBP Recruitment 2022 : ಇಂಡೋ ಟಿಬಿಟನ್ ಬಾರ್ಡರ್ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 248 ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಇಂಡೋ ಟಿಬಿಟನ್ ಬಾರ್ಡರ್ ಪೊಲೀಸ್ ಇಲಾಖೆ
ಹುದ್ದೆಗಳ ಹೆಸರು:ಹೆಡ್‌ ಕಾನ್‌ಸ್ಟೇಬಲ್
ಒಟ್ಟು ಹುದ್ದೆಗಳು 248
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

 

ವಿದ್ಯಾರ್ಹತೆ:
ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 12ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,500/- ರಿಂದ 81,100/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 100/-ರೂ ಅನ್ನು ಪಾವತಿಸಬೇಕು.
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ 
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  8 ಜೂನ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 7 ಜುಲೈ 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
close button