ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಡಿಸಿ ಆಫೀಸ್ ನಲ್ಲಿ ನೇರ ನೇಮಕಾತಿ ಅಧಿಸೂಚನೆ 2022 । DC Office Recruitment 2022

ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಲಬುರಗಿ ಜಿಲ್ಲೆಯಲ್ಲಿ ಖಾಲಿ ಹುದ್ದೆಗಳ ಭರ್ತಿ 2022

DC Office Kalaburagi Recruitment 2022 : ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಲಬುರಗಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಜಿಲ್ಲಾಧಿಕಾರಿಗಳ ಕಾರ್ಯಾಲಯ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 7
ಅರ್ಜಿ ಸಲ್ಲಿಸುವ ಬಗೆ ಆಫ್ ಲೈನ್ 
ಹುದ್ದೆಗಳ ವಿವರ
ಸರ್ವೇ ಸೂಪರ್‌ವೈಸರ್ – 01 
ಕ್ಯಾಡ್ ಅಪರೇಟರ್ – 06 

ವಿದ್ಯಾರ್ಹತೆ:
* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಡಿಪ್ಲೊಮಾ/ ಐಟಿಐ / ಬಿಇ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
* ಅಭ್ಯರ್ಥಿಗಳಿಗೆ 5 ರಿಂದ 8 ವರ್ಷ ವೃತ್ತಿ ಅನುಭವ ಹೊಂದಿರಬೇಕು.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 50,000 ರಿಂದ 60,000/-ರವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಈ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ವಿಧಾನ:
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳನ್ನುಶೈಕ್ಷಣಿಕ ಅಂಕಗಳು, ವೃತ್ತಿ ಅನುಭವ ಮತ್ತು ಮೌಖಿಕ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಹ ಅಭ್ಯರ್ಥಿಗಳು ಕೆಳಗೆ ಕೊಟ್ಟಿರುವ ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆ ಮೂಲಕ  ಅರ್ಜಿ ಸಲ್ಲಿಸಬೇಕು

ಅರ್ಜಿಯನ್ನು ಸಲ್ಲಿಸುವ ವಿಳಾಸ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜೂನ್ 3 ರೊಳಗೆ
ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಕೊಠಡಿ ಸಂಖ್ಯೆ 11, 1 ನೇ ಮಹಡಿ, ಮಿನಿ ವಿಧಾನಸೌದೆ, ಮುಖ್ಯರಸ್ತೆ, ಕಲಬುರಗಿ 585102

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 30 ಮೇ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 4 ಜೂನ್ 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಫಾರ್ಮ್ – 01ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಫಾರ್ಮ್ – 02ಇಲ್ಲಿ ಕ್ಲಿಕ್ ಮಾಡಿ 
close button