ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

FDA SDA ಹುದ್ದೆಗಳಿಗೆ ಅರ್ಜಿ ಅಹ್ವಾನ | ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆ 2022

BDA Recruitment 2022: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಮತ್ತು ದ್ವಿತೀಯ ದರ್ಜೆ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಈಗಾಗಲೇ ಸರ್ಕಾರದಲ್ಲಿ ಪ್ರಥಮ ದರ್ಜೆ ಮತ್ತು ದ್ವಿತೀಯ ದರ್ಜೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ಡೆಪ್ಯೂಟೆಷನ್​ ಆಧಾರದ ಮೇಲೆ ಬಿಡಿಎನಲ್ಲಿ ಕಾರ್ಯ ನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.

ಇಲಾಖೆ ಹೆಸರು:ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಹುದ್ದೆಗಳ ಹೆಸರು:ಪ್ರಥಮ ದರ್ಜೆ, ದ್ವಿತೀಯ ದರ್ಜೆ ಸಹಾಯಕರು
ಒಟ್ಟು ಹುದ್ದೆಗಳು 176
ಅರ್ಜಿ ಸಲ್ಲಿಸುವ ಬಗೆ ಆಫ್ ಲೈನ್ 
ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ 
ಪ್ರಥಮ ದರ್ಜೆ ಸಹಾಯಕ78
ದ್ವಿತೀಯ ದರ್ಜೆ ಸಹಾಯಕ98

ವಿದ್ಯಾರ್ಹತೆ:
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆಯ ಪ್ರಕಾರ ಬಿಡಿಎ ನೇಮಕಾತಿ ನಿಯಮಗಳ ಪ್ರಕಾರ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ.

ನೇಮಕಾತಿ ಮಾನದಂಡ

  • ಕಳೆದ 10 ವರ್ಷಗಳಲ್ಲಿ ಕೆಪಿಎಸ್‌ಸಿಯಿಂದ ಎಫ್‌ಡಿಎ/ಎಸ್‌ಡಿಎ ಅಥವಾ ತತ್ಸಮಾನ ಹುದ್ದೆಗಳಾಗಿ ನೇರವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
  • ನಗರಾಭಿವೃದ್ಧಿ ಇಲಾಖೆ ಮತ್ತು ಕಂದಾಯ ಇಲಾಖೆಯಲ್ಲಿ ಎಫ್‌ಡಿಎ/ಎಸ್‌ಡಿಎ ಅಥವಾ ತತ್ಸಮಾನ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
  • ಆಯ್ಕೆ ಪ್ರಕ್ರಿಯೆ
    ಸ್ವೀಕೃತವಾದ ಎಲ್ಲಾ ಅರ್ಜಿಗಳನ್ನು ಸರ್ಕಾರದ ನಗರಾಭಿವೃದ್ಧಿ ಇಲಾಖೆಗೆ ಕಳುಹಿಸಿ, ನಿಯೋಜನಾ ಆದೇಶವನ್ನು ಪಡೆದ ನಂತರ ಪ್ರಾಧಿಕಾರದಲ್ಲಿ ನಿಯೋಜನೆ ಮೇರೆಗೆ ನೇಮಿಸಿಕೊಳ್ಳಲಾಗುವುದು.

ಆಯ್ಕೆ ವಿಧಾನ 
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ
ಆಯುಕ್ತರು,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ,
ಕುಮಾರ ಪಾರ್ಕ್​ ಪಶ್ಚಿಮ,
ಟಿ. ಚೌಡಯ್ಯ ರಸ್ತೆ,
ಬೆಂಗಳೂರು-560020
ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ: ಜೂನ್​​ 18, 2022

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಏಪ್ರಿಲ್​ 11, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 18 ಜೂನ್​ 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
close button