ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 464 ವಿವಿಧ ಖಾಲಿ ಹುದ್ದೆಗಳ ಭರ್ತಿ 2022

ಕರ್ನಾಟಕ ರಾಜ್ಯ ಮೀಸಲು ಪಡೆಯಲ್ಲಿ ಖಾಲಿ ಇರುವ 464 ವಿವಿಧ ಹುದ್ದೆಗಳ ಭರ್ತಿ 

Karnataka Police Recruitment 2022: (KSISF) ಕರ್ನಾಟಕ ರಾಜ್ಯ ಮೀಸಲು ಪಡೆಯಲ್ಲಿ ಖಾಲಿ ಇರುವ 464 ಅಡುಗೆಯವರು, ಕ್ಷೌರಿಕ, ದೋಭಿ ಮತ್ತು ಕಸಗುಡಿಸುವವರ ಹುದ್ದೆಗಳನ್ನು ನೇರ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕರ್ನಾಟಕ ರಾಜ್ಯ ಮೀಸಲು ಪಡೆಯಲ್ಲಿ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 464
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಜಿಲ್ಲಾವಾರು ಖಾಲಿ ಇರುವ ಹುದ್ದೆಗಳ ವಿವರ: 464
ಬೆಂಗಳೂರು : 25
ಮೈಸೂರು : 30
ಕಲಬುರಗಿ : 25
ಮಂಗಳೂರು : 46
ಶಿಗ್ಗಾವಿ : 50
ತುಮಕೂರು : 74
ಕಲ್ಯಾಣ ಕರ್ನಾಟಕ : 214

ವಿದ್ಯಾರ್ಹತೆ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಎಸ್. ಎಸ್. ಎಲ್. ಸಿ. (SSLC) ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು

ವಯೋಮಿತಿ:
ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 30/08/2022ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಟ 18 ವರ್ಷ ವಯಸ್ಸಾಗಿರಬೇಕು. 30 ವರ್ಷಗಳನ್ನೂ ಮೀರಿರಬಾರದು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 18,600/- ರಿಂದ 32,600/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ₹250/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ₹100/-

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 30 ಜುಲೈ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ಆಗಸ್ಟ್ 2022
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
close button