ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನೇಮಕಾತಿ 2022
VIMS Ballari Recruitment 2022: ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬಳ್ಳಾರಿಯಿಂದ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ |
ಹುದ್ದೆಗಳ ಹೆಸರು: | ಶುಶ್ರೂಷಾಧಿಕಾರಿ |
ಒಟ್ಟು ಹುದ್ದೆಗಳು | 113 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಜಿ.ಎನ್.ಎಂ ಶುಶ್ರೂಷ ತರಬೇತಿ ( 03 ವರ್ಷಕ್ಕಿಂತ ಕಡಿಮೆ ಇರದ ಕೋರ್ಸ್) ಹೊಂದಿರತಕ್ಕದ್ದು. ಬಿಎಸ್ಸಿ ನರ್ಸಿಂಗ್ ಹೊಂದಿದಲ್ಲಿ ಆದ್ಯತೆ ಮೇರೆಗೆ ಪರಿಗಣಿಸಲಾಗುವುದು.
ವಯೋಮಿತಿ:
ಪ.ಜಾತಿ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವಂತ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ.
ಆಯ್ಕೆ ವಿಧಾನ
ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ನೇರ ಸಂದರ್ಶನಕ್ಕೆ ಹಾಜರಾಗುವ ಸಮಯದಲ್ಲಿ ಅರ್ಜಿಯೊಂದಿಗೆ ರೂ. 500 ಶುಲ್ಕವನ್ನು ನಿರ್ದೇಶಕರು, ವಿಮ್ಸ್, ಬಳ್ಳಾರಿ ಇವರ ಹೆಸರಿನಲ್ಲಿ ಡಿ.ಡಿ ಮೂಲಕ ಪಡೆದು ಸಲ್ಲಿಸತಕ್ಕದ್ದು.
ಸಂದರ್ಶನ ನಡೆಯುವ ದಿನಾಂಕದ ವಿವರ :
ನೇರ ಸಂದರ್ಶನ ದಿನಾಂಕ : ಜುಲೈ 25, 2022 ರಂದು ಸಮಯ ಬೆಳಿಗ್ಗೆ 10.00 ಗಂಟೆಗೆ
ಸಂದರ್ಶನ ಸ್ಥಳ : ವಿಮ್ಸ್ ಆಡಳಿತ ಕಛೇರಿ, ಬಳ್ಳಾರಿ
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |