KPSC Group-B Recruitment 2022: ಕರ್ನಾಟಕ ಲೋಕಸೇವಾ ಆಯೋಗದಿಂದ ರೇಷ್ಮೆ ಇಲಾಖೆಯಲ್ಲಿನ ರೇಷ್ಮೆ ವಿಸ್ತರಣಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕ ಲೋಕಸೇವಾ ಆಯೋಗ |
ಹುದ್ದೆಗಳ ಹೆಸರು: | ರೇಷ್ಮೆ ವಿಸ್ತರಣಾಧಿಕಾರಿ (ಗ್ರೂಪ್-ಬಿ) |
ಒಟ್ಟು ಹುದ್ದೆಗಳು | 72 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಸಿರಿಕಲ್ಚರ್ ವಿಷಯದಲ್ಲಿ ಸ್ನಾತಕೋತ್ತರ ಪದವಿ / ಪದವಿ ಅಥವಾ ಬಿಎಸ್ಸಿ ಜತೆಗೆ ಪೋಸ್ಟ್ ಗ್ರಾಜುಯೇಟ್ ಡಿಪ್ಲೊಮ ಇನ್ ಸಿರಿಕಲ್ಚರ್ ಪಾಸ್ ಮಾಡಿದ ಅಥವಾ ಅಗ್ರಿಕಲ್ಚರ್ / ಹಾರ್ಟಿಕಲ್ಚರ್ ಪದವಿ ಪಡೆದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 40,900 ರಿಂದ ರೂ. 78,200 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು – ರೂ. 600
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50
ಎಸ್ಸಿ, ಎಸ್ಟಿ, ಪ್ರ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡಾವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಆಗಸ್ಟ್ 10, 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಸೆಪ್ಟೆಂಬರ್ 08, 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |