ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್ ವಿವಿಧ ಖಾಲಿ ಹುದ್ದೆಗಳು 2022 : Kolar Gram Panchayat Recruitment 2022

 

Kolar Gram Panchayat Recruitment 2022 : ಕೋಲಾರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕೋಲಾರ ಗ್ರಾಮ ಪಂಚಾಯಿತಿ
ಹುದ್ದೆಗಳ ಹೆಸರು:ಕರವಸೂಲಿಗಾರ ಮತ್ತು ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್
ಒಟ್ಟು ಹುದ್ದೆಗಳು 46
ಅರ್ಜಿ ಸಲ್ಲಿಸುವ ಬಗೆ ಆಫ್ ಲೈನ್ 
ಹುದ್ದೆಗಳು ಹುದ್ದೆಗಳ ಸಂಖ್ಯೆ 
ಕರವಸೂಲಿಗಾರ ಮತ್ತು ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್04
ಡಾಟಾ ಎಂಟ್ರಿ ಆಪರೇಟರ್12
ಅಟೆಂಡೆಂಟ್ 30
  

ವಿದ್ಯಾರ್ಹತೆ:

ಕರವಸೂಲಿಗಾರ – ಕನ್ನಡವನ್ನು ಒಂದು ಭಾಷೆಯನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು. ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.

ಡಾಟಾ ಎಂಟ್ರಿ ಆಪರೇಟರ್ – ಕನ್ನಡವನ್ನು ಒಂದು ಭಾಷೆಯನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಆರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.

ಅಟೆಂಡೆಂಟ್ – ಕನ್ನಡವನ್ನು ಒಂದು ವಿಷಯವನ್ನಾಗಿ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರಬೇಕು.

ವಯೋಮಿತಿ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ಹಿಂ. ವರ್ಗ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
ಪ.ಜಾತಿ/ಪ.ಪಂ/ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ


ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ:
ಕರವಸೂಲಿಗಾರ, ಅಟೆಂಡೆಂಟ್ ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಹಾಗೂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು ಹಾಗೂ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಆಗಸ್ಟ್ 10, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 24, 2022
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  / ಅರ್ಜಿ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 

close button