Karnataka High Court Recruitment 2022: ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಅಗತ್ಯವಿರುವ ಗ್ರೂಪ್-ಡಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕ ಉಚ್ಚ ನ್ಯಾಯಾಲಯ |
ಹುದ್ದೆಗಳ ಹೆಸರು: | ಗ್ರೂಪ್-ಡಿ [ಜವಾನ, ಕಾವಲುಗಾರ, ಸ್ವೀಪರ್, ಜವಾನ (ಹೌಸ್ ಕೀಪಿಂಗ್)] |
ಒಟ್ಟು ಹುದ್ದೆಗಳು | 150 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಅಭ್ಯರ್ಥಿಯು ಹತ್ತನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 19,900 – ರೂ. 63,200 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಕ್ಕೆ ಸೇರಿದ ಹಾಗೂ ದೈಹಿಕ ಅಂಗವಿಕಲತೆ ಹೊಂದಿರುವ ಅಭ್ಯರ್ಥಿಗಳು ರೂ. 100, ಉಳಿದ ಅಭ್ಯರ್ಥಿಗಳು ರೂ.200 ಪಾವತಿಸಬೇಕು.
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಉಚ್ಚ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ಆಯ್ಕೆ ವಿಧಾನ:
10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಒಟ್ಟು ಅಂಕಗಳ ಶೇಕಡಾವಾರು ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು. ಸಂದರ್ಶನಕ್ಕೆ ಗರಿಷ್ಠ 10 ಅಂಕಗಳನ್ನು ನಿಗದಿಪಡಿಸಲಾಗಿದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಆಗಸ್ಟ್ 17, 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಸೆಪ್ಟೆಂಬರ್ 17, 2022 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ – 1 | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ – 2 | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ – 1 | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ – 2 | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |