ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ದ್ವಿತೀಯ ದರ್ಜೆ ಸಹಾಯಕರು ಮತ್ತು ವಸೂಲಾತಿ ಸಿಬ್ಬಂದಿ ಹುದ್ದೆಗೆ ಅರ್ಜಿ ಆಹ್ವಾನ

 

ಮಹಾಲಕ್ಷ್ಮೀಪುರ ಶ್ರೀ ವಾಸವಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಬೆಂಗಳೂರು, ಇಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕರು ಮತ್ತು ವಸೂಲಾತಿ ಸಿಬ್ಬಂದಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಮಹಾಲಕ್ಷ್ಮೀಪುರ ಶ್ರೀ ವಾಸವಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ
ಹುದ್ದೆಗಳ ಹೆಸರು:ದ್ವಿತೀಯ ದರ್ಜೆ ಸಹಾಯಕರು ಮತ್ತು ವಸೂಲಾತಿ ಸಿಬ್ಬಂದಿ

ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ 
ವಿದ್ಯಾರ್ಹತೆ :ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿಕಾಂ, ಬಿಬಿಎ, ಮತ್ತು ಬಿಬಿಎಂ ಪದವಿ ಅಥವಾ ಮೇಲ್ಪಟ್ಟ ಪದವಿಯನ್ನು ಪಡೆದಿರಬೇಕು.
ಕೌಶಲಗಳು: ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಓದುವ ಹಾಗೂ ಬರೆಯುವ ಕ್ಷಮತೆ ಇರತಕ್ಕದ್ದು ಹಾಗೂ ಕಂಪ್ಯೂಟರ್ ಅನುಭವ ಇರತಕ್ಕದ್ದು.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 35 ವರ್ಷಗಳನ್ನು ಮೀರಿರಬಾರದು.

ವಸೂಲಾತಿ ಸಿಬ್ಬಂದಿ
ವಿದ್ಯಾರ್ಹತೆ : ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಮೇಲ್ಪಟ್ಟ ಪದವಿಯನ್ನು ಪಡೆದಿರಬೇಕು.
ಇತರೆ ಅರ್ಹತೆ : ಕಂಪ್ಯೂಟರ್ ಅನುಭವ ಹೊಂದಿರತಕ್ಕದ್ದು.
ವಯೋಮಿತಿ : ಗರಿಷ್ಠ 35 ವರ್ಷಗಳ ಒಳಗಿರಬೇಕು.

ವಸೂಲಾತಿ ಸಿಬ್ಬಂದಿ ಹುದ್ದೆಗೆ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ ದ್ವಿಚಕ್ರವಾಹನ ಚಾಲಾಯಿಸುವ ಡ್ರೈವಿಂಗ್ ಲೈಸನ್ಸ್‌ ಹೊಂದಿರಬೇಕು. ಇವುಗಳ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಿರಬೇಕು. ಆಸಕ್ತರು ತಮ್ಮ ಇತ್ತೀಚಿನ ಭಾವಚಿತ್ರ, ತೇರ್ಗಡೆಯಾದ ವಿದ್ಯಾರ್ಹತೆ ಮತ್ತು ಅನುಭವ ಪ್ರಮಾಣ ಪತ್ರಗಳನ್ನು ಲಗತ್ತಿಸಿ ಸ್ವಿವಿವರಗಳೊಂದಿಗೆ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ : ಕಾರ್ಯದರ್ಶಿ ರವರು, ಮಹಾಲಕ್ಷ್ಮೀಪುರ ಶ್ರೀ ವಾಸವಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಮಹಾಲಕ್ಷ್ಮೀ ಬಡಾವಣೆ, ಬೆಂಗಳೂರು – 560086.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ಆಧಾರ್ ಕಾರ್ಡ್
ವಿದ್ಯಾರ್ಹತೆ ದಾಖಲೆ
ಕಾರ್ಯಾನುಭವ ದಾಖಲೆ
ಪಾಸ್‌ಪೋರ್ಟ್‌ ಫೋಟೋ
ಇತರೆ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22-08-2022

close button