Sirsi Urban Sahakari Bank Recruitment 2022: ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ನಿಯಮಿತ |
ಹುದ್ದೆಗಳ ಹೆಸರು: | ವ್ಯವಸ್ಥಾಪಕ/ ಲೆಕ್ಕಿಗ/ ಕಾಯ್ದೆ ಅಧಿಕಾರಿ/ವ್ಯವಸ್ಥಾಪಕರು (ಮಾಹಿತಿ ತಂತ್ರಜ್ಞಾನ) |
ಒಟ್ಟು ಹುದ್ದೆಗಳು | 08 |
ಅರ್ಜಿ ಸಲ್ಲಿಸುವ ಬಗೆ | ಆಫ್ ಲೈನ್ |
ವಿದ್ಯಾರ್ಹತೆ:
ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿ.ಕಾಂ/ ಬಿ.ಬಿ.ಎ/ ಬಿ.ಬಿ.ಎಂ/ ಬಿ.ಇ/ ಬಿ.ಎಸ್ಸಿ/ಬಿ.ಎ ಪದವಿಯಲ್ಲಿ ಕಡ್ಡಾಯವಾಗಿ ಶೇಕಡಾ 60 ಕ್ಕಿಂತ ಹೆಚ್ಚು ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು. ವಿದ್ಯಾರ್ಹತೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಅಧಿಸೂಚನೆಯಲ್ಲಿ ನೀಡಲಾಗಿದೆ.
ವಯೋಮಿತಿ:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 52,650 ರಿಂದ ರೂ. 97,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ರೂ. 500 ಅರ್ಜಿ ಶುಲ್ಕವನ್ನು “ಪ್ರಧಾನ ವ್ಯವಸ್ಥಾಪಕರು, ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್” ಹೆಸರಿಗೆ ಡಿಮಾಂಡ್ ಡ್ರಾಪ್ಟ್ ಮೂಲಕ ಪಾವತಿಸಿ ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು.
ಆಯ್ಕೆ ವಿಧಾನ:
ಈ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಮೌಖಿಕ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಯು ಲಿಖಿತ ಪರೀಕ್ಷೆಯಲ್ಲಿ ಪಡೆಯುವ ಅಂಕಗಳನ್ನು ಶೇಕಡಾ 85ಕ್ಕೆ ನಿಗದಿಪಡಿಸಿ ಉಳಿದ ಪ್ರತಿಶತ 15 ಅಂಕಗಳನ್ನು ಸಂದರ್ಶನಕ್ಕೆ ನೀಡಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ 1:5 ಅನುಪಾತದಲ್ಲಿ ಮೌಖಿಕ ಸಂದರ್ಶನ ನಡೆಸಿ, ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಳಾಸ :
ಪ್ರಧಾನ ವ್ಯವಸ್ಥಾಪಕರು, ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್, ಕೇಂದ್ರ ಕಛೇರಿ, ರಾಯರಪೇಟೆ, ಶಿರಸಿ – 581 401 (ಉ.ಕ)
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಆಗಸ್ಟ್ 17, 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಸೆಪ್ಟೆಂಬರ್ 06, 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಫಾರ್ಮ್ | ಇಲ್ಲಿ ಕ್ಲಿಕ್ ಮಾಡಿ |